ಅಕ್ರಮ ಜಾನುವಾರು ಸಾಗಾಟ: ಕಾರ್‌ ವಶ

ವಿಟ್ಲ, ಜು.೨೩- ಅಕ್ರಮ ಜಾನುವಾರು ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಕಾರೊಂದನ್ನು ವಿಟ್ಲ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ನಿನ್ನೆ ಬೆಳಗ್ಗೆ ನಡೆದಿದೆ.
ವಾಹನ ತಡೆಯುತ್ತಿದ್ದಂತೆ ಆರೋಪಿಗಳು ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದು, ಕಾರಿನಲ್ಲಿದ್ದ ಜಾನುವಾರುಗಳನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ವಿಟ್ಲ ಠಾಣೆಯ ಪೊಲೀಸರು ಭೇಟಿ ನೀಡಿದ್ದಾರೆ.