ಅಕ್ರಮ‌ ಡಿನೋಟಿಫೈ ಬಿಎಸ್ ವೈ ವಿರುದ್ಧ ವಿಚಾರಣೆಗೆ ಸುಪ್ರೀಂ ತಡೆ

ನವದೆಹಲಿ,.ಜು.22- ಅಕ್ರಮ ಡಿ ನೋಟಿಫೈ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ . ಯಡಿಯೂರಪ್ಪ ಅವರ ವಿರುದ್ಧದ ಕ್ರಿಮಿನಲ್ ವಿಚಾರಣೆ ನಡೆಸುವಂತೆ ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶಕ್ಕೆ ಇಂದು ಸರ್ವೋಚ್ಚ ನ್ಯಾಯಾಲಯ ತಡೆನೀಡಿದೆ.
ತಮ್ಮ ವಿರುದ್ಧ ಕ್ತಿಮಿನಲ್ ವಿಚಾರಣೆ ರದ್ದುಗೊಳಿಸುವಂತೆ ಕೋರಿ ಯಡಿಯೂರಪ್ಪನವರು ಸಲ್ಲಿಸಿದ್ದ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿತ್ತು.
ಹೈಕೋರ್ಟ್ ತೀರ್ಪು ಪ್ರಶ್ನಿಸಿ ಯಡಿಯೂರಪ್ಪ ಸುಪ್ರೀಂಕೋರ್ಟ್ ಗೆ ಮೊರೆ ಹೋಗಿದ್ದರು. ಇಂದು ಈ ಅರ್ಜಿಯ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ,ನ್ಯಾಯಮೂರ್ತಿ ಕೃಷ್ಣ ಮುರಾರಿ ಹಾಗೂ ಹಿಮಾ ಕೊಹ್ಲಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠದ ಮುಂದೆ ನಡೆಯಿತು.
ಪ್ರಕರಣ ಕುರಿತಂತೆ ಯಡಿಯೂರಪ್ಪ ಪರ ವಾದ ಮಂಡಿಸಿದ ವಕೀಲ ಕೆ.ವಿ.ವಿಶ್ವನಾಥನ್ ವಾದ ಆಲಿಸಿ ಕರ್ನಾಟಕ ಸರ್ಕಾರಕ್ಕೆ ‌ನೋಟಿಸ್ ನೀಡಿತು.
ಬಿಎಸ್ ವೈ ವಿರುದ್ಧ ವಾಸುದೇವ ರೆಡ್ಡಿ ಎಂಬುವರು ತನಿಖೆ ನಡೆಸುವಂತೆ 2015ರಲ್ಲಿ ಲೋಕಾಯುಕ್ತ ಪೊಲೀಸರಿಗೆ ಬೆಂಗಳೂರು ಜಿಲ್ಲಾ ನ್ಯಾಯಾಲಯ ನಿರ್ದೇಶನ ನೀಡಿತ್ತು.
ಈ ಆದೇಶದಂತೆ ಲೋಕಾಯುಕ್ತ ಪೊಲೀಸರು ಎಫ್ ಐಆರ್ ದಾಖಲಿಸಿದ್ದರು. ಪ್ರಕರಣ ರದ್ದುಕೋರಿ ಹೈಕೋರ್ಟಿಗೆ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿತ್ತು.