ಅಕ್ರಮ ಮದ್ಯಮಾರಾಟ: 2 ವರ್ಷ ಜೈಲು ಶಿಕ್ಷೆ

ಕಲಬುರಗಿ ಆ 6: ಭೀಮಳ್ಳಿ ಗ್ರಾಮದ ಪೆಟ್ಟಿಗೆ ಅಂಗಡಿಯಲ್ಲಿ ಅಕ್ರಮ ಮದ್ಯಮಾರಾಟ ಮಾಡುತ್ತಿದ್ದ ಆರೋಪ ಸಾಬೀತಾದ್ದರಿಂದ ಗ್ರಾಮದ ಬಸಯ್ಯ ನರಸಯ್ಯ ಗುತ್ತೇದಾರ ಎಂಬಾತನಿಗೆ 2 ನೇ ಜೆಎಂಎಫ್‍ಸಿ ನ್ಯಾಯಾಲಯವು 2 ವರ್ಷ ಸಾದಾ ಜೈಲು ಶಿಕ್ಷೆ ಮತ್ತು 20 ಸಾವಿರ ರೂ ದಂಡ ವಿಧಿಸಿದೆ.
2019 ರ ಜುಲೈ 20 ರಂದು ನಡೆದ ಅಬಕಾರಿ ದಾಳಿಯಲ್ಲಿ ಅಕ್ರಮ ಮದ್ಯ ಮಾರಾಟಪತ್ತೆಯಾಗಿದ್ದು, ಆರೋಪಿ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.
ಪ್ರಕರಣದ ವಿಚಾರಣೆ ನಡೆಸಿದ 2 ನೇ ಜೆಎಂಎಫ್‍ಸಿ ನ್ಯಾಯಾಧೀಶರಾದ ಬಸವರಾಜ ನೇಸರಗಿ ಅವರು ಶಿಕ್ಷೆ ವಿಧಿಸಿ ಆದೇಶ ನೀಡಿದ್ದಾರೆ.ಸರಕಾರದ ಪರವಾಗಿ ಸಹಾಯಕ ಸರಕಾರಿ ಅಭಿಯೋಜಕರಾದ ಜಯಶ್ರೀ ಅವರು ವಾದ ಮಂಡಿಸಿದ್ದರು.