ಅಕ್ರಮ ಮದ್ಯ ಮಾರಾಟ:ಒಬ್ಬನ ಬಂಧನ

ವಿಜಯಪುರ,ಮಾ 11: ಅಕ್ರಮವಾಗಿ ಗೋವಾ ಮದ್ಯ ಮಾರಾಟ ಮಾಡುವಾಗ ಪೆÇಲೀಸರು ದಾಳಿ ಮಾಡಿ ಒಬ್ಬನನ್ನು ಬಂಧಿಸಿದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಹಿರಸಂಗ ಗ್ರಾಮದಲ್ಲಿ ನಡೆದಿದೆ.
ಬಸವರಾಜ ಆಕಳವಾಡಿ ಬಂಧಿತ ಆರೋಪಿ. ಆಕ್ರಮವಾಗಿ 18 ಲೀಟರ ಗೋವಾ ರಾಜ್ಯದ ಮದ್ಯ ಮಾರಾಟ ಮಾಡುತ್ತಿದ್ದ ವೇಳೆ ಅಬಕಾರಿ ಪೆÇಲೀಸರು ದಾಳಿ ನಡೆಸಿ ಮದ್ಯ ಜಪ್ತಿ ಮಾಡಿದ್ದಾರೆ. ಅಬಕಾರಿ ಪೆÇಲೀಸ ಪರೀನಾ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಈ ಕುರಿತು ಇಂಡಿ ಅಬಕಾರಿ ಪೆÇಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.