ಅಕ್ರಮ ಮದ್ಯ ಮಾರಾಟ: ಮಹಿಳೆ ಬಂಧನ

ಹುಲಿಯೂರುದುರ್ಗ, ಮಾ. ೨೬- ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಕಿರಾಣಿ ಅಂಗಡಿ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ ಮಹಿಳೆಯವನ್ನು ಬಂಧಿಸಿ, ೧೭ ಲೀಟರ್ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.
ಹೋಬಳಿಯ ಬ್ಯಾಡರಹಳ್ಳಿಯ ಕಿರಾಣಿ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ
ಮೇರೆಗೆ ಅಬಕಾರಿ ನಿರೀಕ್ಷಕರಾದ ಮಲ್ಲಿಕಾರ್ಜನ್ ನೇತೃತ್ವದಲ್ಲಿ ಉಪನಿರೀಕ್ಷಕ ನವೀನ್ ಮತ್ತು ಸಿಬ್ಬಂದಿ ದಾಳಿ ನಡೆಸಿ ಅಂಗಡಿಯಲ್ಲಿ ಅಕ್ರಮವಾಗಿ ಮಾರಾಟ ಮಾಡಲು ಸಂಗ್ರಹಿಸಿಟ್ಟಿದ್ದ ಮದ್ಯವನ್ನು ವಶಪಡಿಸಿಕೊಂಡು ಮಹಿಳೆಯನ್ನು ಬಂಧಿಸಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಅಬಕಾರಿ ಅಧಿಕಾರಿಗಳು ಮುಂದಿನ ಕ್ರಮ ಕೈಗೊಂಡಿದ್ದಾರೆ.