ಅಕ್ರಮ ಮದ್ಯ ವಶ

ದಾವಣಗೆರೆ; ಏ. 12; ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ಸೋಮವಾರ ರೂ 50,120 ಮೌಲ್ಯದ ಅಕ್ರಮ ಮದ್ಯ  ಹಾಗೂ ಒಂದು ದ್ವಿಚಕ್ರ ವಾಹನವನ್ನು ಅಬಕಾರಿ ಇಲಾಖೆಯಿಂದ ಜಪ್ತು ಪಡಿಸಿಕೊಂಡು ಅಕ್ರಮ ಮದ್ಯದ ಸಾಗಾಣಿಕೆ/ದಾಸ್ತಾನು ಕುರಿತಂತೆ ಘೋರ ಮೊಕದ್ದಮೆಯನ್ನು ದಾಖಲಿಸಿಕೊಳ್ಳಲಾಗಿದೆ.
ಚುನಾವಣಾ ಹಿನ್ನಲೆಯಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟುವ ಸಲುವಾಗಿ ಜಾರಿ ಮತ್ತು ತನಿಖಾ ಕಾರ್ಯಗಳನ್ನು ಚುರುಕುಗೊಳಿಸಿ ದಾಳಿಯನ್ನು ನಡೆಸಿದ್ದು, ಸೋಮವಾರ ನಗರದ ಚಿಗಟೇರಿ ಜಿಲ್ಲಾ ಆಸ್ಪತ್ರೆ ಮುಂಭಾಗದ ರಸ್ತೆಯಲ್ಲಿ ರಸ್ತೆಗಾವಲು ನಡೆಸುತ್ತಿರುವಾಗ ದೊಡ್ಡೇಶಿ ಬಿನ್ ಹನುಮಂತಪ್ಪ ಇವರು ಅಕ್ರಮವಾಗಿ ಸಾಗಿಸುತ್ತಿದ್ದ 25,920 ಲೀ. ಮದ್ಯ, ಹಾಗೂ 1 ದ್ವಿಚಕ್ರ ವಾಹನ ಸೇರಿದಂತೆ ಒಟ್ಟು ರೂ. 50,120 ಮೊತ್ತದ ದಾಸ್ತಾನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಉಪವಿಭಾಗದ ಅಬಕಾರಿ ಉಪಧೀಕ್ಷಕರಾದ ರವಿ ಎಂ ಮರಿಗೌಡ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.