ಅಕ್ರಮ ಮರಳು ಗಣಿಗಾರಿಕೆ : ವಾಹನಗಳು ಸೀಜ್!

ಸಂಜೆವಾಣಿ ವಾರ್ತೆ

ಶಿವಮೊಗ್ಗ, ಜೂ. 3: ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಅಕ್ರಮ ಮರಳು ಗಾಣಿಗಾರಿಕೆ ನಡೆಸುತ್ತಿದ್ದ ಸ್ಥಳಗಳ ಮೇಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಿರಿಯ ಭೂ ವಿಜ್ಞಾನಿ ನವೀನ್ ಕುಮಾರ್ ನೇತೃತ್ವದ ತಂಡ ದಿಢೀರ್ ದಾಳಿ ನಡೆಸಿದೆ. ಶಿವಮೊಗ್ಗ ತಾಲೂಕಿನ ಬೇಡರಹೊಸಹಳ್ಳಿ, ಪಿಳ್ಳಂಗೆರೆ ಗ್ರಾಮ ಸೇರಿದಂತೆ ಹೊಸನಗರ ತಾಲೂಕು ರಿಪ್ಪನ್’ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಈ ವೇಳೆ ಸ್ಥಳದಲ್ಲಿದ್ದ ಜೆಸಿಬಿ, ಟ್ರ್ಯಾಕ್ಟರ್, ಟಿಪ್ಪರ್ ಗಳನ್ನು ವಶಕ್ಕೆ ಪಡೆದು ಸ್ಥಳೀಯ ಪೊಲೀಸ್ ಠಾಣೆಗಳಿಗೆ ಹಸ್ತಾಂತರಿಸಲಾಗಿದೆ. ಪ್ರಕರಣ ದಾಖಲಿಸಲಾಗಿದೆ.