ಅಕ್ರಮ ಮರಳು ವಶ

ಆಲಮೇಲ :ಮೇ.19:ತಾಲೂಕಿನ ದೇವಣಗಾಂವ ಮತ್ತು ಶಂಬೆವಾಡ ಗ್ರಾಮಗಳ ವ್ಯಾಪ್ತಿಯ ಭೀಮಾನದಿ ಪಾತ್ರದಲ್ಲಿ ಸರಕಾರದ ಪರವಾನಿಗೆ ಇಲ್ಲದೆ ಅನಧಿಕೃತವಾಗಿ ಮರಳು ದಂಧೆ ನಡೆಸಲಾಗುತ್ತಿರುವ ಖಚಿತ ಮಾಹಿತಿ ಮೇರೆಗೆ ನಿನ್ನೆ ಸಂಜೆ ಸುಮಾರಿಗೆ ಅನಿರೀಕ್ಷಿತವಾಗಿ ದಾಳಿ ನಡೆಸಿ ಅಂದಾಜು ರೂ. 531505 ಮೌಲ್ಯದ 629 ಕ್ಯೂಬಿಕ್ ಮೀಟರ್ ಅನಧಿಕೃತ ಮರಳನ್ನು ವಶಕ್ಕೆ ಪಡೆದಿದೆ ಎಂದು ಇಂಡಿ ಉಪವಿಭಾಗಾಧಿಕಾರಿ ರಾಹುಲ್ ಸಿಂಧೆ ತಿಳಿಸಿದ್ದಾರೆ
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ತಹಶೀಲ್ದಾರ್ ಸಂಜೀವಕುಮಾರ ದಾಸರ, ಪೆÇೀಲಿಸ್ ಇಲಾಖೆ ಅಧಿಕಾರಿಗಳು ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡ ತಂಡವು ದಾಳಿ ನಡೆಸಿ ಅನಧಿಕೃತ ಮರುಳು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದ ಅವರು ಒಟ್ಟು ಎರಡು ಕಡೆ ಈ ದಾಳಿ ನಡೆಸಲಾಗಿದ್ದು,
ಕ್ರಮವಾಗಿ ದೇವಣಗಾಂವ ಗ್ರಾಮದ ಎರಡು ಸ್ಥಳಗಳಲ್ಲಿ 294 ಕ್ಯೂಬಿಕ್ ಮೀಟರ್ ಹಾಗೂ ಶಂಬೇವಾಡ ಗ್ರಾಮದ ಎರಡು ಸ್ಥಳಗಳಲ್ಲಿ 335 ಕ್ಯೂಬಿಕ್ ಮೀಟರ್‍ಗಳಂತೆ ಒಟ್ಟು 629 ಕ್ಯೂಬಿಕ್ ಮೀಟರ್ ಮರಳನ್ನು ವಶಕ್ಕೆ ಪಡೆಯಲಾಗಿದ್ದು ವಶಪಡಿಸಿಕೊಂಡ ಅಕ್ರಮ ಮರಳು ಅಂದಾಜು 531505 ರೂಪಾಯಿ ಮೌಲ್ಯದಾಗಿದ್ದು, ಆಲಮೇಲ ಪೆÇಲೀಸ್ ಠಾಣೆಯಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದು, ಐಪಿಸಿ ಸೆಕ್ಷನ್ – 379 ಗಣಿ ಮತ್ತು ಭೂವಿಜ್ಞಾನ ಇಲಾಖೆ ಕಾಯ್ದೆಯನ್ವಯ ಎಫ್‍ಐಆರ್ ದಾಖಲಿಸಲಾಗಿದೆ ಎಂದು ಉಪವಿಭಾಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.