ಅಕ್ರಮ ರೆಮ್‌ಡಿಸಿವಿರ್ ಮಾರಾಟ ವೈದ್ಯನ ಸೆರೆ

ಬೆಂಗಳೂರು,ಮೇ ೨೧- ಅಕ್ರಮವಾಗಿ ರೆಮ್‌ಡಿಸಿವಿರ್ ಚುಚ್ಚುಮದ್ದು ಮಾರಾಟ ಮಾರಾಟ ಮಾಡುತ್ತಿದ್ದ ಖತರ್ನಾಕ್ ವೈದ್ಯನೊಬ್ಬನನ್ನು ಕಾಡುಗೊಂಡನಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಬಾಗಲೂರಿನ ಮಾರುತಿ ಆಸ್ಪತ್ರೆಯ ವೈದ್ಯ ಡಾ. ಅಜಯ್‌ಕುಮಾರ್ ಯಾಧವ್ (೨೫) ಬಂಧಿತ ಆರೋಪಿಯಾಗಿದ್ದಾನೆ ಎಂದು ಪೂರ್ವ ವಿಭಾಗದ ಡಿಸಿಪಿ ಡಾ. ಶರಣಪ್ಪ ತಿಳಿಸಿದ್ದಾರೆ.
ಬಂಧಿತನಿಂದ ೩೬ ಸಾವಿರ ಮೌಲ್ಯದ ೮ ರೆಮ್‌ಡಿಸಿವಿರ್ ಚುಚ್ಚುಮದ್ದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಉತ್ತರ ಪ್ರದೇಶದ ಸಿದ್ದಾರ್ಥ ನಗರ ಮೂಲದ ಆರೋಪಿಯು ಅಪ್ನಾ ಕ್ಲಿನಿಕ್ ಎಂಬ ಚಿಕಿತ್ಸಾಲಯವನ್ನು ಇಟ್ಟುಕೊಂಡಿದ್ದು, ಮಾರುತಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ನೀಡು ರೆಮ್‌ಡಿಸಿವಿರ್ ಚುಚ್ಚುಮದ್ದನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ. ಹೆಚ್‌ಬಿಆರ್ ಲೇಔಟ್‌ನ ಬಿಡಿಎ ಕಾಂಪ್ಲೆಕ್ಸ್ ಬಳಿ ರೆಮ್‌ಡಿಸಿ
ವಿರ್ ಚುಚ್ಚ್ಚುಮದ್ದನ್ನು ೧೧ ಸಾವಿರ ರೂ.ಗೆ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಕಾರ್ಯಾಚರಣೆ ನಡೆಸಿದ ಕಾಡುಗೊಂಡನ ಹಳ್ಳಿ ಪೊಲೀಸ್ ಇನ್ಸ್‌ಪೆಕ್ಟರ್ ಸಂತೋಷ್ ಕುಮಾರ್ ಮತ್ತವರ ಸಿಬ್ಬಂದಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.