ಅಕ್ರಮ ಸಂಬಂಧ ಪತ್ನಿ ಕೊಲೆಗೈದ ಪತಿಗೆ ಜೀವಾವಧಿ ಕಾರಾಗೃಹ ಶಿಕ್ಷೆ ಕಡಿತ

ಬೆಂಗಳೂರು,ನ.9-ತನ್ನ ಸಹೋದರನೊಂದಿಗೆ ಅಕ್ರಮ ಸಂಬಂಧ ಇರಿಸಿಕೊಂಡಿದ್ದಾಳೆ ಎಂದು ಪತ್ನಿಯನ್ನು ಕೊಂದಿದ್ದ ಪತಿಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಕಾರಾಗೃಹ ಶಿಕ್ಷೆಯನ್ನು ಹೈಕೋರ್ಟ್ ಕಡಿತ ಮಾಡಿ ತೀರ್ಪು ನೀಡಿದೆ. ಇದೇ ವೇಳೆ ಜೀವಾವಧಿ ಕಾರಾಗೃಹ ಶಿಕ್ಷೆ ವಿಧಿಸುವ ಅಧಿಕಾರ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್​ಗಷ್ಟೇ ಇದೆ ಎಂದು ತಿಳಿಸಿದೆ.
ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆ ರದ್ದುಪಡಿಸುವಂತೆ ಕೋರಿ ಶಿವಮೊಗ್ಗದ ಚಂದ್ರಶೇಖರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಬಿ. ವೀರಪ್ಪ ನೇತೃತ್ವದ ವಿಭಾಗೀಯ ಪೀಠ, ಈ ತೀರ್ಪು ನೀಡಿದೆ. ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಜೈಲು ಶಿಕ್ಷೆ ಕಡಿತ ಮಾಡಿರುವ ಪೀಠ, ಏಳು ವರ್ಷ ಜೈಲು ಹಾಗೂ 15 ಸಾವಿರ ರೂ. ದಂಡ ವಿಧಿಸಿದೆ. ಈಗಾಗಲೇ 5 ವರ್ಷಗಳಿಂದ ಜೈಲು ಶಿಕ್ಷೆ ಅನುಭವಿಸಿರುವ ಚಂದ್ರಶೇಖರ್ ಇನ್ನೆರಡು ವರ್ಷಗಳ ಬಳಿಕ ಬಿಡುಗಡೆಯಾಗಲಿದ್ದಾನೆ.
ಪ್ರಕರಣದ ವಿವರ
ಶಿವಮೊಗ್ಗ ಜಿಲ್ಲೆಯ ಸಾಗರ ನಿವಾಸಿಯಾದ ಚಂದ್ರಶೇಖರ್, ಪತ್ನಿ ದ್ಯಾವಮ್ಮಳನ್ನು 2015ರ ಸೆಪ್ಟೆಂಬರ್​​ನಲ್ಲಿ ಹತ್ಯೆ ಮಾಡಿದ ಆರೋಪದಡಿ ಬಂಧಿತನಾಗಿದ್ದ. ತನ್ನ ಸೋದರ ದ್ಯಾವಪ್ಪ ಜೊತೆ ಪತ್ನಿ ಅಕ್ರಮ ಸಂಬಂಧ ಇರಿಸಿಕೊಂಡಿದ್ದಾಳೆ ಎಂದು ಜಗಳ ಮಾಡಿದ ಸಂದರ್ಭದಲ್ಲಿ ಆಕೆಯನ್ನು ಜೋರಾಗಿ ತಳ್ಳಿದ ಪರಿಣಾಮ ಕಲ್ಲಿಗೆ ಬಡಿದು ದ್ಯಾವಮ್ಮ ಮೃತಪಟ್ಟಿದ್ದಳು. ಬಳಿಕ ಮೃತ ದೇಹವನ್ನು ಅರಣ್ಯ ಪ್ರದೇಶದಲ್ಲಿ ಸಮಾಧಿ ಮಾಡಲಾಗಿತ್ತು. ಘಟನೆ ಬಳಿಕ ಸೀತಮ್ಮಳ ತಂದೆ ಮಗಳು ನಾಪತ್ತೆಯಾದ ಕುರಿತು ಪ್ರಕರಣ ದಾಖಲಿಸಿದ್ದರು. ತನಿಖೆ ನಡೆಸಿದ್ದ ಪೊಲೀಸರು ಆರೋಪಿ ಪತಿಯನ್ನು ಬಂಧಿಸಿದ್ದರು. ಬಳಿಕ, ಶಿವಮೊಗ್ಗದ 5 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ದೋಷಾರೋಪಣೆ ಸಲ್ಲಿಸಿದ್ದರು.
ನ್ಯಾಯಾಲಯ 25 ಸಾವಿರ ದಂಡ ಹಾಗೂ ಜೀವಾವಧಿ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಇದರ ವಿರುದ್ಧ ಚಂದ್ರಶೇಖರ್​ ಹೈಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಅಪರಾಧಿ ಮಹಿಳೆಯನ್ನು ಕೊಲ್ಲುವ ಉದ್ದೇಶದಿಂದ ಹಲ್ಲೆ ಮಾಡಿಲ್ಲ ಎಂದು ಅಭಿಪ್ರಾಯಪಟ್ಟು