ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಿಗೆ ಸನ್ಮಾನ

ಬೀದರ್:ಆ.6: ಬೀದರ್ ತಾಲ್ಲೂಕು ಪಂಚಾಯಿತಿಯ ಅಕ್ಷರ ದಾಸೋಹ ಯೋಜನೆ ಪ್ರಭಾರ ಸಹಾಯಕ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡ ಜಾಕೀರ್ ಹುಸೇನ್ ಅವರನ್ನು ಕಲ್ಯಾಣ ಕರ್ನಾಟಕ ಪ್ರೌಢಶಾಲಾ ಶಿಕ್ಷಕರ ಸಂಘದ ವತಿಯಿಂದ ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸನ್ಮಾನಿಸಲಾಯಿತು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪಾಂಡುರಂಗ ಬೆಲ್ದಾರ್ ಶಾಲು ಹೊದಿಸಿ ಸತ್ಕರಿಸಿದರು. ಜಾಕೀರ್ ಹುಸೇನ್ ಅವರು ಉತ್ತಮವಾಗಿ ಕಾರ್ಯ ನಿರ್ವಹಿಸುವ ವಿಶ್ವಾಸ ಇದೆ ಎಂದರು.

ಎಲ್ಲರ ಸಹಕಾರದೊಂದಿಗೆ ನನಗೆ ದೊರೆತ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಲು ಪ್ರಯತ್ನಿಸುವೆ ಎಂದು ಜಾಕೀರ್ ಹುಸೇನ್ ಹೇಳಿದರು.

ಗುಲಬರ್ಗಾ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯೆ ಪ್ರತಿಭಾ ಚಾಮಾ, ಜಿಲ್ಲಾ ಅನುದಾನಿತ ಪ್ರೌಢಶಾಲಾ ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ವಿಜಯಕುಮಾರ ಪಾಟೀಲ ಯರನಳ್ಳಿ, ಪ್ರಧಾನ ಕಾರ್ಯದರ್ಶಿ ಸಿದ್ರಾಮ ನಿಜಾಂಪುರೆ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಗೌರವಾಧ್ಯಕ್ಷ ದೇವಿಪ್ರಸಾದ್ ಕಲಾಲ್, ಅಧ್ಯಕ್ಷ ಗೋವಿಂದ ಪೂಜಾರಿ, ಬಳವಂತರಾವ್ ರಾಠೋಡ್, ಎಂ.ಡಿ. ಶಹಾಬುದ್ದಿನ್, ರವಿಕುಮಾರ ಕುಮನೋರ, ಅಬ್ದುಲ್ ಅಲ್ಲಾಸ್, ಬಳಿರಾಮ ಕುರ್ನಾಳೆ, ಸಂಜೀವಕುಮಾರ ಕನೇರಿ, ಅರ್ಷಿಯಾ, ಪ್ರಲ್ಹಾದ್, ಎಡಿಸನ್, ವಿಜಯಕುಮಾರ, ಅನಿತಾ ಬಿರಾದಾರ, ಸಲಾವುದ್ದಿನ್ ಇದ್ದರು.