ಅಕ್ಷರ ಪಬ್ಲಿಕ್ ಶಾಲೆಯಲ್ಲಿ ಮಾರುಕಟ್ಟೆ ಮೇಳ


ಸಂಜೆವಾಣಿ ವಾರ್ತೆ
ಗಂಗಾವತಿ, ಫೆ,5- :ನಗರದ  ಅಕ್ಷರ ಪಬ್ಲಿಕ್ ಶಾಲೆಯ  ವಿದ್ಯಾರ್ಥಿಗಳಿಗೆ ಆಹಾರ ತಯಾರಿಕೆ ಹಾಗೂ ಮಾರಾಟ ಮೇಳ ಆಯೋಜನೆ ಮಾಡುವ ಮೂಲಕ ಮಾರುಕಟ್ಟೆ ವ್ಯಾಪಾರದ ಬಗ್ಗೆ ಮಾಹಿತಿ ನೀಡಲಾಯಿತು.
ಸಂಸ್ಥೆಯ ಅಧ್ಯಕ್ಷರು ರವಿ ಚೈತನ್ಯ ರೆಡ್ಡಿ  ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,  ಪ್ರತಿನಿತ್ಯ ಶಾಲೆಯಲ್ಲಿ ಪಾಠ ಕೇಳಬೇಕಾದ ವಿದ್ಯಾರ್ಥಿಗಳೆಲ್ಲಾ ಇವತ್ತು ವ್ಯಾಪಾರದಲ್ಲಿ ತೊಡಗಿಸಿಕೊಂಡಿದ್ರು. ಶಾಲೆಯ ಆವರಣದಲ್ಲಿ ವಿವಿಧ ಸ್ಟಾಲ್‌ಗಳಿಂದ ಅಳವಡಿಸಿದ್ದು, ವಿದ್ಯಾರ್ಥಿಗಳೇ ಬಗೆ ಬಗೆಯ ತಿಂಡಿ ತಿನಿಸುಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ರು.ವಿದ್ಯಾರ್ಥಿಗಳಿಗೆ ವ್ಯವಹಾರದ ಪ್ರಾಯೋಗಿಕ ಜ್ಞಾನ ತಿಳುವಳಿಕೆ ಬರಬೇಕು ಮತ್ತು ಮನೆಯಲ್ಲಿ ಅಡುಗೆ ಮಾಡುವ ಸಂದರ್ಭದಲ್ಲಿ ಮಕ್ಕಳು ಪಾಲಕರಿಗೆ ಸಹಾಯ ಮಾಡುವ ಮನೋಭಾವನೆ ಬರಬೇಕೆಂಬ ಉದ್ದೇಶದಿಂದ ಪ್ರತಿ ವರ್ಷ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ,
ವಿದ್ಯಾರ್ಥಿಗಳ ಜೊತೆ ಪಾಲಕರು, ಶಿಕ್ಷಕರೂ ಸಹ ಸ್ಟಾಲ್‌ಗಳಿಗೆ ಭೇಟಿ ಕೊಟ್ಟು ವಿದ್ಯಾರ್ಥಿಗಳು ತಯಾರಿಸಿದ ಆಹಾರಗಳನ್ನು ಖರೀದಿಸುತ್ತಿದ್ದಾರೆ ಎಂದರು.ಈ ಸಂದರ್ಭದಲ್ಲಿ ಮುಖ್ಯ ಉಪಾಧ್ಯಾಯನಿ ಹಿಮಾರೆಡ್ಡಿ, ತೇಜಸ್ವಿ, ಶಿಕ್ಷಕ ವೃಂದ ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಾಲಕರು ಉಪಸ್ಥಿತರಿದ್ದರು.