ಅಕ್ಷಿಗೆ ರಾಷ್ಟ್ರ ಪ್ರಶಸ್ತಿ

ʼಅಕ್ಷಿʼ ಚಿತ್ರಕ್ಕೆ ಪ್ರಾದೇಶಿಕ ವಿಭಾಗದಲ್ಲಿ ರಾಷ್ಟ್ರ ಪ್ರಶಸ್ತಿಗೆ ಪಾತ್ರವಾಗಿದೆ. ಹೀಗಾಗಿ ಇಡೀ ತಂಡ ಖುಷಿಯಲ್ಲಿದೆ.

ನಿರ್ಮಾಪಕ ಕಲಾದೇಗುಲ ಶ್ರೀನಿವಾಸ್‌ ಮಾತನಾಡಿ, ಆರಂಭದಲ್ಲಿ ಸದಭಿರುಚಿಯ ಚಿತ್ರ ಮಾಡಬೇಕು ಅನ್ನುವುದಷ್ಟೇ ಇತ್ತು. ಒಳ್ಳೆಯ ಕಥೆ ಬೇಕು ಅಂತ ಯೋಚಿಸುತ್ತಿದ್ದಾಗ ನಿರ್ದೇಶಕ ಮನೋಜ್‌ ಕುಮಾರ್‌ ತಾವೇ ಬರೆದಿದ್ದ ಕಥೆ ತಂದ್ರು. ಈ ಕಥೆ ಸಿನಿಮಾ ಮಾಡಿದ್ರೆ ಹೇಗೆ ಅಂತ ಹೇಳಿದ್ರು. ನನ್ನ ನಿರ್ಮಾಣದ ಮೊದಲ ಸಾಹಸಕ್ಕೆ ಇದೇ ಕಥೆ ಸೂಕ್ತ ಎನಿಸಿತು. ಆಗ ಶುರುವಾಗಿದ್ದು ʼಅಕ್ಷಿʼ ಚಿತ್ರ. ಇವತ್ತು ಅದೇ ಕಥೆಗೆ ರಾಷ್ಟ್ರ ಪ್ರಶಸ್ತಿ ಬಂದಿದೆ. ಇದಕ್ಕೆ ನಿಜಕ್ಕೂ ಕಾರಣರು ನಾವಲ್ಲ. ಆ ಕಥೆ. ಆ ಕಥೆಯ ಪ್ರೇರಕರು ವರನಟ ಡಾ. ರಾಜ್‌ ಕುಮಾರ್.‌ ಅವರೇ ಈ ಪ್ರಶಸ್ತಿಗೆ ಕಾರಣ ಅಂದ್ರು ʼ ನಿರ್ಮಾಪಕ ಶ್ರೀನಿವಾಸ್.‌

ನಿರ್ದೇಶಕ ಮನೋಜ್‌ ಕುಮಾರ್.”‌ಮಾತನಾಡಿ ವರನಟ ರಾಜ್‌ ಕುಮಾರ್‌ ನಿಧನರಾದ ದಿನಗಳಲ್ಲಿ ನಾನಾಗ ಊರಲ್ಲಿದ್ದೆ. ಅವರು ಇನ್ನಿಲ್ಲ ಅಂತ ಜನ್ರು ದುಃಖ ಪಡುತ್ತಿದ್ದ ಹೊತ್ತಲೇ ಅವರು, ಕಣ್ಣನ್ನು ದಾನ ಮಾಡಿದ್ರಂತೆ ಅಂತ ಅಚ್ಚರಿ ವ್ಯಕ್ತಪಡಿಸುತ್ತಿದ್ರು. ಆ ಸಂಬಂಧ ಸಾಕಷ್ಟು ಸುದ್ದಿಗಳು ಬಂದಿದ್ದವು. ಅದು ನಂಗೆ ಒಂಥರ ಕಾಡ ತೊಡಗಿತು. ನೇತ್ರ ದಾನ ಅನ್ನೋದು ಹೇಗೆ ಇನ್ನೊಬ್ಬರ ಬದುಕಲ್ಲಿ ಬೆಳಕು ನೀಡುತ್ತದೆ ಅಂತ ಕುತೂಹಲ ಮೂಡಿಸಿತು. ಅದನ್ನೇ ಇಟ್ಟುಕೊಂಡು ಕಥೆ ಬರೆದೆ ಸಿನಿಮಾ ಆಗಿ ರಾಷ್ಟ್ರ ಪ್ರಶಸ್ತಿ ಯೂ ಬಂದಿದೆ ಎಂದರು.

ಕಾಮಿಡಿ ಕಿಲಾಡಿಗಳು ಖ್ಯಾತಿಯ ಗೋವಿಂದೇ ಗೌಡ, ಕಿರಿತೆರೆಯ ನಟಿ ಇಳಾ ವಿಟ್ಲಾ, ಬಾಲ ನಟರಾದ ಮಿಥುನ್‌, ನಾಗರಾಜ್‌ , ಕಸ್ತೂರಿ ಸೇರಿದಂತೆ ಮತ್ತಿತರರು ಚಿತ್ರದಲ್ಲಿದ್ದಾರೆ.

ನಟ ಗೋವಿಂದೇಗೌಡ, ಇಳಾ ವಿಟ್ಲಾ ಪಾತ್ರಗಳ ಜತೆಗೆ ಚಿತ್ರೀಕರಣ ಅನುಭವ ಹಂಚಿಕೊಂಡು ಪಾತ್ರದಲ್ಲಿ ಅಭಿನಯಿಸಿದೆವು ಎನ್ನುವುದಕ್ಕಿಂತ ನಿರ್ದೇಶಕರು ಪಾತ್ರಕ್ಕೆ ನಮ್ಮಿಂದ ಅಭಿನಯ ತೆಗೆಸಿದರು. ಹಾಗೆಯೇ ರಾಷ್ಟ್ರ ಪ್ರಶಸ್ತಿ ಬಂದಿದ್ದು ತುಂಬಾನೆ ಖುಷಿ ಕೊಟ್ಟಿದೆ.ಹಾಗೆಯೇ ಇನ್ನಷ್ಟು ಜವಾಬ್ದಾರಿ ಹೆಚ್ಚಿಸಿದೆ ಎಂದರು.

.

ಚಿತ್ರಕ್ಕೆ ಮುಕಲ್‌ ಗೌಡ ಛಾಯಾಗ್ರಹಣ ಮಾಡಿದ್ದಾರೆ. ಶ್ರೀನಿವಾಸ್‌ ಜತೆಗೆ ರವಿ ಹಾಗೂ ರಮೇಶ್‌ ಬಂಡವಾಳ ಹಾಕಿದ್ದಾರೆ. ಶ್ರೀನಿವಾಸ್‌ ಜತೆಗಿನ ಸ್ನೇಹದ ಕಾರಣಕ್ಕೆ ನಟ ನೆನಪಿರಲಿ ಪ್ರೇಮ್‌ ಸುದ್ದಿಗೋಷ್ಟಿಯಲ್ಲಿ ಹಾಜರಿದ್ದು , ಚಿತ್ರ ತಂಡಕ್ಕೆ ಅಭಿನಂದನೆ ಸಲ್ಲಿಸಿದರು.