ಅಕ್ಷಿತ್ ಶಶಿಕುಮಾರ್ ಹೊಸ ಚಿತ್ರ ಕಾದಾಡಿ

ಹಿರಿಯ ನಟ ಶಶಿಕುಮಾರ್ ಪುತ್ರ ಅಕ್ಷಿತ್‌ಶಶಿಕುಮಾರ್ ನಟನೆಯ ಹೊಸ ಚಿತ್ರ ’ಕಾದಾಡಿ’  ಸದ್ದುಗದಲ್ಲವಿಲ್ಲದೆ. ಬಹುತೇಕ ಚಿತ್ರ ಪೂರ್ಣಗೊಳಿಸಿದೆ.

ಗೋವಾ, ಚಿಕ್ಕಮಗಳೂರು, ಹೈದರಬಾದ್, ಚೆನ್ನೈ ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆಸಿ, ಐಟಂ ಹಾಡನ್ನು ಸದ್ಯದಲ್ಲೆ ಮುಗಿಸಲಿ ತಂಡ ಯೋಜನೆ ರೂಪಿಸಿಕೊಂಡಿದೆ.

ಕನ್ನಡ, ತೆಲುಗು ಮತ್ತು ತಮಿಳು ಭಾಷೆಯಲ್ಲಿ ಸಿದ್ದಗೊಳ್ಳುತ್ತಿರುವ ಚಿತ್ರವ್ಙು ಸತೀಶ್ ಮಲೇಮ್‌ಪಟಿ ನಿರ್ದೇಶಿಸಿ, ಅರುಣಂ ಫಿಲಿಂಸ್ ಮುಖಾಂತರ ನಿರ್ಮಾಣ ಮಾಡುತ್ತಿದ್ದಾರೆ.

 ತ್ಯಾಗಮಯವಾಗುತ್ತಿರುವ ಜನರ ಜೀವನ  ದಿನದ ಅಂತ್ಯದಲ್ಲಿ ಪ್ರತಿಯೊಬ್ಬರು ತ್ಯಾಗಮಯಿರಾಗುತ್ತಾರೆ. ನಾವೆಲ್ಲರೂ ಕಾದಾಡುತ್ತಾ ಒಂದು ದಿನ ಸಾಯುತ್ತೇವೆ. ಆದರೆ ನಮ್ಮ ಜೀವನವನ್ನು ತ್ಯಾಗ ಮಾಡುವ ಮೂಲಕ ಸಮಾಜಕ್ಕೆ ಏನಾನ್ನಾದರೂ ಕೊಡಬೇಕು. ಮಕ್ಕಳಿಗೆ ಏನಾದರೂ ಆಗಬೇಕು. ನಾವು ದಿನದಿಂದ ದಿನಕ್ಕೆ ಹೋರಾಟ ನಡೆಸುತ್ತಿದ್ದೆವೆ. ಇಂತಹ ಅಂಶಗಳನ್ನು ಥ್ರಿಲ್ಲರ್ ಮೂಲಕ ತೋರಿಸುವ ಪ್ರಯತ್ನ ಮಾಡಲಾಗಿದೆ.

ಲಾವಣ್ಯಸಾಹುಕಾರ, ಚಾಂದಿನಿತಮಿಳರಸನ್ ನಾಯಕಿಯರು. ಉಳಿದಂತೆ ಪೋಸಾನಿ, ರವಿಕಾಳೆ, ಮಾರಿಮುತ್ತು, ಪ್ರೇಮ್‌ಮನೋಹರ್, ಶ್ರವಣ್‌ರಾಘವೇಂದ್ರ ಮುಂತಾದವರು ನಟಿಸಿದ್ದಾರೆ. ಭೀಮ್ಸ್ ಸಿಸಿರಿಲಿಯೋ ಸಂಗೀತ ಡಿ.ಯೋಗಿಪ್ರಸಾದ್ ಛಾಯಾಗ್ರಹಣವಿದೆ.