ಸಂಜೆವಾಣಿ ವಾರ್ತೆ
ಚಾಮರಾಜನಗರ, ಅ.12:- ದೆಹಲಿಯಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ಅಖಲಿ ಭಾರತ ನಾಗರಿಕ ಸೇವಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುವ ಜಿಲ್ಲೆಯ ಮೂವರು ಕ್ರೀಡಾಪಟುಗಳನ್ನು ಜಿಲ್ಲಾಡಳಿತದ ವತಿಯಿಂದ ಸನ್ಮಾನಿಸಲಾಯಿತು.
ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಹಾಗೂ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಚಂದ್ರಶೇಖರ್ ಅವರು ರಾ?À?ಟ್ರಮಟ್ಟಕ್ಕೆ ಆಯ್ಕೆಯಾಗಿರುವ ಕ್ರೀಡಾಪಟುಗಳಾದ ಮಂಜುನಾಥ್ ಯಲವೇಲಿ (ಕುಸ್ತಿ), ಪ್ರವೀಣ್ (ವೈಟ್ ಲಿಫ್ಟಿಂಗ್) ಹಾಗೂ ನಂದಿನಿ (ಕಬ್ಬಡ್ಡಿ) ಅವರನ್ನು ಸನ್ಮಾನಿಸಿ ಗೌರವಿಸಿದರು.
ದೆಹಲಿಯ ತ್ಯಾಗರಾಜ ಸ್ಟೇಡಿಯಂ ನಲ್ಲಿ ನಡೆಯುವ ರಾಜ್ಯ ಸರ್ಕಾರಿ ನೌಕರರ ಅಖಿಲ ಭಾರತ ನಾಗರಿಕ ಸೇವಾ ಕ್ರೀಡಾಕೂಟಕ್ಕೆ ಚಾಮರಾಜನಗರ ಜಿಲ್ಲೆಯಿಂದ ಆಯ್ಕೆಯಾಗಿ ಕರ್ನಾಟಕವನ್ನು ಪ್ರತಿನಿಧಿಸುತ್ತಿರುವ ಜಿಲ್ಲೆಯ ಕ್ರೀಡಾಪಟುಗಳಿಗೆ ಜಿಲ್ಲಾ ಸರ್ಕಾರಿ ನೌಕರರ ಸಂಘದ ವತಿಯಿಂದ ಟ್ರ್ಯಾಕ್ ಸೂಟ್ ನೀಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಮಹದೇವಸ್ವಾಮಿ, ಜಿಲ್ಲಾ ಖಜಾಂಚಿ ಮಹದೇವಯ್ಯ, ಕ್ರೀಡಾ ಕಾರ್ಯದರ್ಶಿ ರಕ್ಷಿತ್ ಕುಮಾರ್ ಇತರರು ಇದ್ದರು.