ಅಖಿಲ ಭಾರತ ಮುಷ್ಕರಕ್ಕೆ ಸಿಐಟಿಯು ಬೆಂಬಲ

ರಾಯಚೂರು.ನ.9- ಜಿಲ್ಲೆಯ ಎಲ್ಲಾ ಅಕ್ಷರ ದಾಸೋಹ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ನ.26ರಂದು ಅಖಿಲ ಭಾರತ ಮುಷ್ಕರಕ್ಕೆ ಬೆಂಬಲ ನೀಡಲು ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ನೌಕರರ ಸಂಘ ಜಿಲ್ಲಾ ಘಟಕದ ವತಿಯಿಂದ ಇಂದು ಪ್ರತಿಭಟನೆ ಮಾಡಿದರು.
ಅವರಿಂದು ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಕಚೇರಿ ಅಧಿಕಾರಿಗೆ ಮನವಿ ಸಲ್ಲಿಸುತ್ತಾ ನೂತನ ಶಿಕ್ಷಣ ನೀತಿ 2020 ನ್ನು ಜಾರಿ ಮಾಡುವಾಗ ಬಿಸಿಯೂಟ ಯೋಜನೆಯನ್ನು ಬಲಿಷ್ಠಪಡಿಸಿ ಈಗ ಇರುವ ಮಾದರಿಯನ್ನು ಮುಂದುವರಿಸಬೇಕು,ಕೇಂದ್ರಿಕೃತ ಅಡುಗೆ ಕೇಂದ್ರ ಮಾದರಿ ಬೇಡ ಯಾವುದೇ ಖಾಸಗಿ ಸಂಸ್ಥೆಗಳಿಗೆ ಯಾವುದೇ ಸ್ವರೂಪದ ಜವಾಬ್ದಾರಿ ಕೊಡಬಾರದು.
ಕೆಲಸದ ಅವಧಿಯನ್ನು 04 ಗಂಟೆಯಿಂದ 06 ಗಂಟೆಗೆ ಅಕ್ಷರ ದಾಸೋಹ ಕೈಪಿಡಿಯಲ್ಲಿ ಬದಲಾಯಿಸಬೇಕು,ಶಾಲೆಗಳಲ್ಲಿ ಗ್ರೂಪ್ ಡಿ ನೌಕರರು ಇಲ್ಲದಿರುವದರಿಂದ ಈ ನೌಕರರಿಂದಲೇ ಶಾಲಾ ಸ್ವಚ್ಚತೆ ,ಕೈತೋಟ ನಿರ್ವಹಣೆ , ಶಾಲಾ ಸಮಯದ ಘಂಟೆ ಬಾರಿಸುವುದು ಇನ್ನಿತರೆ ಕೆಲಸ ನೀಡಿ ಈ ನೌಕರರಿಗೆ ಶಾಲಾ ಸಿಬ್ಬಂದಿಗಳೆಂದು ನೇಮಿಸಿ ನೇಮಕಾತಿ ಆದೇಶ ನೀಡಬೇಕು. ಬಿಸಿಯೂಟ ಮಹಿಳೆಯರನ್ನು ಸರಕಾರಿ ನೌಕರರನ್ನಾಗಿ ಪರಿಗಣಿಸಬೇಕು , ಬಿಸಿಯೂಟ ನೌಕರರನ್ನು ನೇರವಾಗಿ ಶಿಕ್ಷಣ ಇಲಾಖೆ ಅಡಿಯಲ್ಲಿ ಮೇಲ್ವಿಚಾರಣೆ ನಡೆಸಬೇಕು , ಬಿಸಿಯೂಟ ನೌಕರರಿಗೆ ಕನಿಷ್ಟ ವೇತನ ಮತ್ತು ಆರೋಗ್ಯ ಸೌಲಭ್ಯ ನೀಡಬೇಕು . ಲಾಕ್ – ಡೌನ್ ನಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಒಳಗಾದ ಕುಟುಂಬಗಳಿಗೆ 7500 / – ನಗದು ನೀಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಡಿಎಸ್ ಶರಣಬಸವ,ಉಮಾ,ಈರಮ್ಮ,ಸುಜಾತ, ಯಲ್ಲಮ್ಮ, ನಾಗಮ್ಮ.ಹೆಚ್.ಪದ್ಮ,ವರಲಕ್ಷ್ಮೀ ಸೇರಿದಂತೆ ಇನ್ನಿರರು ಉಪಸ್ಥಿತರಿದ್ದರು.