ಅಖಿಲ ಭಾರತ ಮುಷ್ಕರಕ್ಕೆ ಸಿಐಟಿಯು ಬೆಂಬಲ

ರಾಯಚೂರು. ನ.09- ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನ.26 ರಂದು ನಡೆಯಲಿರುವ ಅಖಿಲ ಭಾರತ ಮುಷ್ಕರಕ್ಕೆ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಬೆಂಬಲ ನೀಡಿ ಇಂದು ಪ್ರತಿಭಟನೆ ನಡಿಸಿದರು.
ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿದ ಅವರು ನ.26ರಂದು ನಡೆಯಲಿರುವ ಮುಷ್ಕರಕ್ಕೆ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಬಂದ್ ಮಾಡಿ ಪ್ರತಿಭಟನೆಯನ್ನು ಮಾಡಲಾಗುತ್ತಿದ್ದು, ನಮ್ಮ ಬೇಡಿಕೆಗಳದ ಅಂಗನವಾಡಿ ನೌಕರರಿಗೆ ಕನಿಷ್ಠ ವೇತನ 21000 ಹೆಚ್ಚಿಸಿ ಅವರನ್ನು ಖಾಯಂ ಮಾಡಿ 10 ಸಾವಿರ ನೀಡಬೇಕು, 2020 ನೂತನ ಶಿಕ್ಷಣ ನೀತಿಯಿಂದ ಅಂಗನವಾಡಿ ಕೇಂದ್ರಗಳನ್ನು ರಕ್ಷಿಸಿ, ಅಂಗನವಾಡಿ ಕೇಂದ್ರಗಳಲ್ಲಿ ಶಾಲಾ ಪೂರ್ವ ಪ್ರಾಥಮಿಕ ಶಿಕ್ಷಣ ಕಡ್ಡಾಯಗೊಳಿಸಿ ಹೆಚ್ಚುವರಿ ಕೆಲಸ ನಿರ್ಬಂಧಿಸಿ,ಪ್ರಾರಂಭಿಕ ಬಾಲ್ಯವಸ್ಥೆಯ ಪಾಲನೆ ಮತ್ತು ಶಿಕ್ಷಣ ಅಂಗನವಾಡಿ ಕೇಂದ್ರಗಳಲ್ಲಿ ಕೊಡಲು ಶಾಸನವಾಗಿ ಮಾಡಬೇಕು.
ರಾಜ್ಯದಲ್ಲಿ ಈಗಾಗಲೇ ನಿವೃತ್ತಿ ಯಾದವರಿಗೆ ನಿವೃತ್ತಿ ವೇತನ ಬಿಡುಗಡೆ ಮಾಡಿ ಎಲ್ಲರಿಗೂ ಪಿಂಚಣಿಯನ್ನು ಒದಗಿಸಿ ಹಿಂದಿನ ಪಿಂಚಣಿ ಯೋಜನೆಯನ್ನು ಜಾರಿಗೆ ತರಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಹೆಚ್. ಪದ್ಮ, ವರಲಕ್ಷ್ಮೀ, ರಂಗಮ್ಮ ಅನ್ವರ,ಪಾರ್ವತಿ, ಗಂಗಮ್ಮ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.