
ಲಕ್ಷ್ಮೇಶ್ವರ, ಮೇ24: ಪಟ್ಟಣದ ಕಮಲಾ ವೆಂಕಪ್ಪ ಅಗಡಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ 26ರಂದು ಮಿಲಾಂಝೆ-23 ಹಾಗೂ ಪದವಿ ಪ್ರಮಾಣ ಪತ್ರ ವಿತರಣಾ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ಪ್ರಾಚಾರ್ಯ ಡಾ.ಉದಯಕುಮಾರ ಹಂಪಣ್ಣವರ ಹೇಳಿದರು. ಪಟ್ಟಣದ ಕಮಲಾ ವೆಂಕಪ್ಪ ಅಗಡಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.
ಪಟ್ಟಣದ ಕಮಲಾ ವೆಂಕಪ್ಪ ಅಗಡಿ ಕಾಲೇಜಿನಲ್ಲಿ ಮಿಲಾಂಝೆ-23 ಕಾರ್ಯಕ್ರಮವು 26ರಂದು ಶುಕ್ರವಾರ ಬೆಳಿಗ್ಗೆ 9.30ಕ್ಕೆ ಉದ್ಘಾಟನೆಗೊಳ್ಳುತ್ತದೆ. ಹುಬ್ಬಳ್ಳಿಯ ಡೋಕೆಟ್ರನ್ ಕಂಪನಿಯ ಸಿಇಓ ಅಜಯ್ ಕಬಾಡಿ ಅವರು ಉದ್ಘಾಟನೆ ನೆರವೇರಿಸುವರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ಜರುಗುತ್ತದೆ.
ಇಂಜನೀಯರಿಂಗ್ ಪದವಿ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮವು 27ರಂದು ಶನಿವಾರ ಬೆಳಿಗ್ಗೆ 9.30ಕ್ಕೆ ಅರಂಭವಾಗುತ್ತದೆ. ಧಾರವಾಡದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಸಾಗರ ಮನಗಾವೆ ಅವರು ಉದ್ಘಾಟಿಸುವರು. ಕಾರ್ಯಕ್ರಮದಲ್ಲಿ ಗಣ್ಯರು, ಪಾಲಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸುವರು ಎಂದು ಅವರು ಹೇಳಿದರು.
ಸುದ್ದಿಗೋಷ್ಟಿಯಲ್ಲಿ ಉಪಪ್ರಾಚಾರ್ಯ ಡಾ.ಪರಶುರಾಮ ಬಾರ್ಕಿ, ಡಾ,ಗಿರೀಶ್ ಯತ್ತಿನಹಳ್ಳಿ, ಮಾಲತೇಶ ಐ.ಜಿ ಇದ್ದರು. ಪ್ರೋ,ಸೋಮು ಕೆರಿಮನಿ ಸ್ವಾಗತಿಸಿ ವಂದಿಸಿದರು.