ಅಗತ್ಯ ಪ್ರಮಾಣದಲ್ಲಿ ಆಮ್ಲಜನಕ, ರೆಮಿಡಿಸಿವಿರ್ ದಾಸ್ತಾನು ,ಭಯ ಬೇಡ; ಭರವಸೆ

ನವದೆಹಲಿ, ಏ. 25- ದೇಶದಲ್ಲಿ ಆಮ್ಲಜನಕ ಮತ್ತು ರೆಮಿಡಿಸಿವಿರ್ ಔಷಧಿ ಕೊರತೆ ಎದುರಾಗಿರುವ ನಡುವೆಯೇ ಸೋಂಕಿತರು ಭಯಪಡುವ ಅಗತ್ಯವಿಲ್ಲ ಅಗತ್ಯ ಪ್ರಮಾಣದ ದಾಸ್ತಾನು ಇದೆ ಎಂದು ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮುಖ್ಯಸ್ಥ ಡಾ.ರಣದೀಪ್ ಗುಲೇರಿಯಾ ಹೇಳಿದ್ದಾರೆ.

ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೊನಾ ಸೋಂಕಿತರು ಮತ್ತು ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆತಂಕಪಡುವುದು ಬೇಡ. ಅಗತ್ಯ ಪ್ರಮಾಣದಲ್ಲಿ ಆಮ್ಲಜನಕ ಮತ್ತು ರೆಮಿಡಿಸಿವಿರ್ ದಾಸ್ತಾನು ಮಾಡಿಕೊಳ್ಳಲಾಗುತ್ತಿದೆ ಎಂದು ಅವರು ಭರವಸೆ ನೀಡಿದ್ದಾರೆ.

ದೇಶದ ಎಲ್ಲಾ ಜಿಲ್ಲೆಗಳಲ್ಲಿ ಆಮ್ಲಜನಕ ಘಟಕ ಕರಿಯ ಪ್ರಧಾನಿ ನರೇಂದ್ರಮೋದಿ ಸಮ್ಮತಿಸಿದ್ದಾರೆ ಆರಂಭದ ಹಂತದಲ್ಲಿ 551 ಜಿಲ್ಲೆಗಳಲ್ಲಿ ಆಮ್ಲಜನಕ ಘಟಕ ಆರಂಭವಾಗಲಿದೆ. ಹೀಗಾಗಿ ಸೋಂಕಿತರು ಭಯ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ದೆಹಲಿಯ ವಿವಿಧ ಆಸ್ಪತ್ರೆಗಳಲ್ಲಿ ನೆನ್ನೆ ಮೊನ್ನೆ ಹಲವಾರು ಮಂದಿ ಆಮ್ಲಜನಕ ಕೊರತೆಯಿಂದ ಮೃತಪಟ್ಟಿದ್ದಾರೆ ಹೀಗಾಗಿ ಅವರು ದೆಹಲಿಯ ಜನರಿಗೆ ಭರವಸೆ ನೀಡಿದ್ದಾರೆ.

ಕೇಂದ್ರ ಸರ್ಕಾರ ಈಗಾಗಲೇ ವಿವಿಧ ಮೂಲಗಳಿಂದ ಆಮ್ಲಜನಕವನ್ನು ಸಂಗ್ರಹಿಸುವ ಕೆಲಸ ಮಾಡಲಾಗುತ್ತದೆ ಜೊತೆಗೆ ಅಗತ್ಯವಿರುವ ಕಡೆ ಆಮ್ಲಜನಕ ಘಟಕ ಆರಂಭಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಮುಂದಿನ ದಿನಗಳಲ್ಲಿ ಆಮ್ಲಜನಕ ಹೆಚ್ಚು ಲಭ್ಯವಾಗಲಿದೆ ಹೀಗಾಗಿ ಯಾರು ಭಯ ಆತಂಕ ಪಡುವುದು ಬೇಡ ಎಂದು ಅವರು ಮನವಿ ಮಾಡಿದ್ದಾರೆ.

ಅದೇ ರೀತಿ ರೆಮಿಡಿಸಿವಿರ್ ಚುಚ್ಚುಮದ್ದು ಕೂಡ ಎಲ್ಲರಿಗೂ ಸಿಗುವಂತೆ ಕ್ರಮ ಕೈಗೊಳ್ಳಾಗುವುದು ಎಂದು ತಿಳಿಸಿದ್ದಾರೆ