ಅಗತ್ಯ ವಸ್ತುಗಳ ಖರೀದಿಗೆ ಮೇ 31- ಜೂ.3 ರಂದು ಅವಕಾಶ : ಡಿಸಿ

ದಾವಣಗೆರೆ,ಮೇ.30; ಜಿಲ್ಲೆಯಾದ್ಯಂತ ಜೂನ್ 7 ರವರೆಗೆ ಕೋವಿಡ್ ನಿಯಂತ್ರಣ ಕ್ರಮಗಳು ಜಾರಿಯಲ್ಲಿದ್ದು, ಸಾರ್ವಜನಿಕರಿಗೆ ಅಗತ್ಯ ವಸ್ತುಗಳನ್ನು ಖರೀದಿಸಲು ಅವಕಾಶ ನೀಡುವ ಹಿನ್ನೆಲೆಯಲ್ಲಿ ಮೇ 31 ಮತ್ತು ಜೂನ್ 03 ರಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ಮಾತ್ರ ಕಿರಾಣಿ ಅಂಗಡಿಗಳು, ದಿನಸಿ, ಹಣ್ಣು ತರಕಾರಿ, ಮಾಂಸ ಮತ್ತು ಮೀನು ಹಾಗೂ ಮದ್ಯದ ಅಂಗಡಿಗಳಿಗೆ ಅನುಮತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಕೋವಿಡ್ ನಿಯಂತ್ರಣ ಹಿನ್ನೆಲೆ ಹೊರಡಿಸಲಾಗಿರುವ ನರ‍್ಬಂಧ/ಮರ‍್ಗಸೂಚಿಗಳ ಕುರಿತು ಮಾಹಿತಿ ನೀಡಲು ಕರೆಯಲಾಗಿದ್ದ ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಕೋವಿಡ್-19 ಸಾಂಕ್ರಾಮಿಕ ರೋಗವನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ರ‍್ಕಾರದ ನರ‍್ದೇಶನದಂತೆ ಈಗಾಗಲೇ ಹಲವಾರು ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆದರೂ ಜಿಲ್ಲೆಯಲ್ಲಿ ಸತತವಾಗಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಪ್ರಮಾಣ ತಗ್ಗಿಸುವ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜನಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಿದಾಗ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿರುವ ಹಿನ್ನೆಲೆಯಲ್ಲಿ ಕೆಲವೊಂದು ನರ‍್ಬಂಧ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹೊಸ ನಿರ್ಬಂಧಗಳನ್ವಯ ಮೇ.31 ಮತ್ತು ಜೂ.3 ರಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಮಾತ್ರ ಕಿರಾಣಿ ಅಂಗಡಿಗಳು, ದಿನಸಿ, ಹಣ್ಣು ತರಕಾರಿಗಳು, ಮಾಂಸ ಮತ್ತು ಮೀನು, ಮದ್ಯದ ಅಂಗಡಿಗಳಿಗೆ ಮಾತ್ರ ಅವಕಾಶ ಇದ್ದು ಉಳಿದ ದಿನಗಳು ಹಾಲು ಮತ್ತು ಔಷಧಿಗಳನ್ನು ಹೊರತುಪಡಿಸಿ ಸಂಪೂರ್ಣವಾಗಿ ಬಂದ್ ಇರುತ್ತದೆ. ಹಾಗೂ ಜೂ.4 ರವರೆಗೆ ಮಾತ್ರ ನಿಗಧಿತ ಮದುವೆ ಕಾರ‍್ಯಕ್ರಮಗಳನ್ನು ನಡೆಸಲು ಸಂಬಂಧಿಸಿದ ಪ್ರಾಧಿಕಾರದಿಂದ ಅನುಮತಿ ಪಡೆದು ಗರಿಷ್ಠ 10 ಜನರು ಮಾತ್ರ ಭಾಗವಹಿಸಿ ಮದುವೆ ಕಾರ‍್ಯಕ್ರಮ ನಡೆಸಲು ಅವಕಾಶ ನೀಡಲಾಗಿದೆ. ಈ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಲ್ಲಿ ವಿಪತ್ತು ನಿರ್ವಹಣೆ ಕಾಯ್ದೆಯನ್ವಯ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಮಾತನಾಡಿ, ಎಪಿಡೆಮಿಕ್ ಡಿಸೀಸಸ್ ಆ್ಯಕ್ಟ್ ಅಡಿಯಲ್ಲಿ ಇದುವರೆಗೆ 131 ಪ್ರಕರಣಗಳನ್ನು ದಾಖಲಿಸಲಾಗಿದೆ. ಮಾಸ್ಕ್ ಮತ್ತು ಸಾರ್ವಜನಿಕ ಅಂತರ ಕಾಯ್ದುಕೊಳ್ಳದೇ ಇರುವ ಬಗ್ಗೆ 52,438 ಪ್ರಕರಣ ದಾಖಲಿಸಲಾಗಿದೆ. ವಿಪತ್ತು ನಿರ್ವಹಣೆ ಕಾಯ್ದೆಯಡಿ 1, ರೆಮಿಡೆಸಿವರ್ ಲಸಿಕೆ ಕುರಿತು 2 ಪ್ರಕರಣ ದಾಖಲಿಸಲಾಗಿದೆ. ಸಿಸಿಸಿ, ಆಕ್ಸಿಜನ್ ರೀಫಿಲ್ಲಿಂಗ್ ಸ್ಟೇಷನ್ ಇತರೆಡೆ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಹೊಸ ಮರ‍್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಅಗತ್ಯ ಪೊಲೀಸ್ ನಿಯೋಜನೆ ಮಾಡಲಾಗಿದೆ ಎಂದರು.ಜಿಲ್ಲಾ ಪಂಚಾಯತ್ ಸಿಇಒ ಡಾ.ವಿಜಯ ಮಹಾಂತೇಶ್ ದಾನಮ್ಮನವರ್ ಮಾತನಾಡಿ, ಗ್ರಾಮೀಣ ಭಾಗಗಳಲ್ಲಿ ಕೋವಿಡ್ ಪ್ರಕರಣಗಳನ್ನು ಕಡಿಮೆ ಮಾಡಲು ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸೋಂಕಿತರನ್ನು ಮನವೊಲಿಸಿ ಸಿಸಿಸಿ ಗೆ ಕರೆತರಲಾಗುತ್ತದೆ. ಆಶಾ ಮತ್ತು ಅಂಗನವಾಡಿ ಕರ‍್ಯರ‍್ತೆಯರು ಮನೆಮನೆಗೆ ಭೇಟಿ ನೀಡಿ ಸೋಂಕಿತರ ಕುರಿತು ಅಗತ್ಯ ಮಾಹಿತಿಗಳನ್ನು ಪಡೆದುಕೊಳ್ಳುತ್ತಿದ್ದಾರೆ ಎಂದರು. ಪತ್ರಿಕಾಗೋಷ್ಟಿಯಲ್ಲಿ ಅಪರ ಜಿಲ್ಲಾಧಿಕಾರಿ ಪೂಜಾರವೀರಮಲ್ಲಪ್ಪ, ಡಿಹೆಚ್‌ಓ ಡಾ.ನಾಗರಾಜ್, ಆರ್‌ಸಿಹೆಚ್ ಅಧಿಕಾರಿ ಡಾ.ಮೀನಾಕ್ಷಿ ಇದ್ದರು.