ಅಗತ್ಯ ಸೇವೆಗಳಡಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು-ಸಿಬ್ಬಂದಿಗಳ ಪಟ್ಟಿಮಾಡಿ

ದಾವಣಗೆರೆ; ಏ. 6; ಅಂಚೆ ಮತಪತ್ರದ ಮೂಲಕ ತಮ್ಮ ಹಕ್ಕು ಚಲಾಯಿಸಬಹುದಾದ ಅರ್ಹ ವ್ಯಕ್ತಿಗಳನ್ನು ಗುರುತಿಸಿ ಪಟ್ಟಿಮಾಡಿ ಚುನಾವಣಾಧಿಕಾರಿಗಳಿಗೆ ನೀಡಬೇಕು ಎಂದು ತಾಲ್ಲೂಕು ತಹಶೀಲ್ದಾರ್ ಹಾಗೂ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಎಂ.ಬಿ ಅಶ್ವಥ್ ಹೇಳಿದರು.ನಗರದ ತಾಲ್ಲೂಕು ಕಚೇರಿಯಲ್ಲಿ ಅಂಚೆ ಮತದಾನದ ಪೂರ್ವಸಿದ್ಧತೆ ಕುರಿತಂತೆ ಸಭೆ ನಡೆಸಿದ ಅವರು, ಮೇ 10 ರಂದು ನಡೆಯುವ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳಡಿ ಕಾರ್ಯ ನಿರ್ವಹಿಸುತ್ತಿರುವ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಚುನಾವಣೆ ದಿನಾಂಕದಂದು ಅವರುಗಳ ಮತಗಟ್ಟೆಗಳಲ್ಲಿ ಮತದಾನ ಮಾಡಲು ಸಾಧ್ಯವಾಗದೇ ಇರುವುದರಿಂದ ಅಂಚೆ ಮತಪತ್ರದ ಮೂಲಕ ಮತದಾನ ಮಾಡಲು ಭಾರತ ಚುನಾವಣಾ ಆಯೋಗ ಅವಕಾಶ ಕಲ್ಪಿಸಿದೆ ಎಂದರು.