ಅಗತ್ಯ ಸೇವೆಗಳ 36 ಮತದಾರರಿಂದ ಮತ ಚಲಾವಣೆ


ಬಳ್ಳಾರಿ,ಮೇ 03-  ವಿಧಾನಸಭಾ ಸಾರ್ವತ್ರಿಕ ಚುನಾವಣೆ ಕರ್ತವ್ಯ ನಿಮಿತ್ಯ ಮತದಾನ ದಿನದಂದು ಗೈರು ಹಾಜರಾಗಬಹುದಾದ ಹಾಗೂ ಅಗತ್ಯ ಸೇವೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರು ತಮ್ಮ ಮತವನ್ನು ಚಲಾಯಿಸಲು ಈ ಬಾರಿ ಚುನಾವಣಾ ಆಯೋಗವು ವಿಶೇಷ ವ್ಯವಸ್ಥೆ ಕಲ್ಪಿಸಿದ್ದು, ಜಿಲ್ಲೆಯಲ್ಲಿ ಇಂತಹ ಅಗತ್ಯ ಸೇವೆಗಳ ಕ್ಷೇತ್ರದ 36 ಮತದಾರರು ಮೊದಲ ದಿನವಾದ ಮಂಗಳವಾರ ಮತದಾನ ಮಾಡಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ತಿಳಿಸಿದ್ದಾರೆ.
ಅಗತ್ಯ ಸೇವೆಯಲ್ಲಿ ಕರ್ತವ್ಯ ನಿರತರಾಗಿರುವ ವಿವಿಧ ಕ್ಷೇತ್ರಗಳ ಜಿಲ್ಲೆಯ ಸಿಬ್ಬಂದಿಗಳು ಮತದಾನದಿಂದ ವಂಚಿತರಾಗಬಾರದು ಎಂಬ ಸದುದ್ದೇಶದಿಂದ ಚುನಾವಣಾ ಆಯೋಗವು, ಮತದಾನ ಮಾಡಲು ವಿಶೇಷ ಅವಕಾಶ ಕಲ್ಪಿಸಿದೆ.
 ಕ್ಷೇತ್ರವಾರು ವಿವರ ಇಂತಿದೆ:
91-ಕಂಪ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 11 ಮತದಾರರ ಪೈಕಿ 03 ಜನ ಮತ ಚಲಾಯಿಸಿದ್ದಾರೆ. 92-ಸಿರುಗುಪ್ಪ ಕ್ಷೇತ್ರದಲ್ಲಿ ಒಟ್ಟು 34 ಮತದಾರರ ಪೈಕಿ 08 ಮತದಾರರು, 93-ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಒಟ್ಟು 59 ಮತದಾರರ ಪೈಕಿ 06 ಮತದಾರರು, 94-ಬಳ್ಳಾರಿ ನಗರ ಕ್ಷೇತ್ರದಲ್ಲಿ ಒಟ್ಟು 77 ಮತದಾರರ ಪೈಕಿ 10 ಮತದಾರರು ಹಾಗೂ 95-ಸಂಡೂರು ಕ್ಷೇತ್ರದಲ್ಲಿ ಒಟ್ಟು 26 ಮತದಾರರ ಪೈಕಿ 09 ಮತದಾರರು ತಮ್ಮ ಮತ ಚಲಾಯಿಸಿದ್ದಾರೆ.
ಅಗತ್ಯ ಸೇವೆಗಳ ನೌಕರರು ಮತ ಚಲಾಯಿಸಲು ಮೇ 04 ವರೆಗೆ ಕಾಲಾವಕಾಶ ಒದಗಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ತಿಳಿಸಿದ್ದಾರೆ.

One attachment • Scanned by Gmail