ಅಗ್ನಿಬನ್ನಿರಾಯಸ್ವಾಮಿ ಜಯಂತಿಯ ಸರಳ ಆಚರಣೆ

ದಾವಣಗೆರೆ. ಮಾ.29; ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ  ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಅಗ್ನಿಬನ್ನಿರಾಯಸ್ವಾಮಿ ಅವರ ಜಯಂತಿ ಕಾರ್ಯಕ್ರಮವನ್ನು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ, ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್, ಜಗಳೂರು ತಹಶೀಲ್ದಾರ್ ಸಂತೋಷ್, ಹೊನ್ನಾಳಿ ಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ, ಪಶು ಸಂಗೋಪನೆಯ ಉಪನಿರ್ದೇಶಕರು ಚಂದ್ರಶೇಖರ ಸುಂಕದ, ಅಂಬೇಡ್ಕರ್ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕ ರಮೇಶ, ಮತ್ತಿತರು ಹಾಜರಿದ್ದರು.