ಅಗ್ನಿಶಾಮಕ ಠಾಣಾಧಿಕಾರಿ ಬಿ.ಪಿ ಕೃಷ್ಣಪ್ಪಗೆ ರಾಷ್ಟ್ರಪತಿ ಪದಕ :

 ಹಿರಿಯೂರು ನ-14: ಹಿರಿಯೂರಿನ ಅಗ್ನಿಶಾಮಕ ಠಾಣೆಯಲ್ಲಿ ಅಗ್ನಿಶಾಮಕ ಠಾಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಬಿ ಪಿ ಕೃಷ್ಣಪ್ಪ ನವರು ಸಲ್ಲಿಸಿದ ಉತ್ತಮ ಸೇವೆಯನ್ನು ಪರಿಗಣಿಸಿ  ರಾಷ್ಟ್ರಪತಿಯವರ ಶ್ಲಾಘನೀಯ ಪದಕ ಪ್ರಧಾನ ಮಾಡಲಾಗಿದೆ. ಬೆಂಗಳೂರಿನ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ರವರು 2021ನೇ ಸಾಲಿನ ರಾಷ್ಟ್ರ ಪತಿ ಪದಕ ನೀಡಿ  ಗೌರವಿಸಿದರು . ಈ ಸಂದರ್ಭದಲ್ಲಿ ಗೃಹ ಸಚಿವರಾದ ಅರಗ ಜ್ಞಾನೇಂದ್ರ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಡಿಜಿಪಿ ಅಮರ್ ಕುಮಾರ್ ಪಾಂಡೆ ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು. ರಾಷ್ಟ್ರಪತಿ ಪದಕ ಪಡೆದ ಶ್ರೀಯುತ ಬಿ.ಪಿ ಕೃಷ್ಣಪ್ಪನಯವರಿಗೆ ಅಗ್ನಿಶಾಮಕ ಇಲಾಖೆಯ ಅಧಿಕಾರಿ ವರ್ಗದವರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಶ್ರೀಯುತ  ಬಿ.ಪಿ ಕೃಷ್ಣಪ್ಪನವರು ಜುಲೈ 2022- ರಲ್ಲಿ  ವಯೋ ನಿವೃತ್ತರಾಗಿದ್ದಾರೆ. ಇವರ ಸೇವಾ ಅವಧಿಯಲ್ಲಿ ಅನೇಕ ತೀವ್ರ ಅಗ್ನಿ ಕರೆಗಳು ರಕ್ಷಣಾ ಕರೆಗಳಲ್ಲಿ ಭಾಗವಹಿಸಿ ಸಾರ್ವಜನಿಕರ ಪ್ರಾಣ ರಕ್ಷಣೆ ಮತ್ತು ಆಸ್ತಿಪಾಸ್ತಿ ರಕ್ಷಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಇವರು 2015 ರಲ್ಲಿ ಮುಖ್ಯಮಂತ್ರಿಗಳ ಚಿನ್ನದ ಪದಕವನ್ನು ಸಹ ಪಡೆದಿದ್ದರು ಇದೀಗ ರಾಷ್ಟ್ರಪತಿ ಪದಕ ಪಡೆದಿರುತ್ತಾರೆ.