ವಿಜಯಪುರ, ಜೂ.02: ಜಿಲ್ಲಾ ವಿಪತ್ತು ನಿರ್ವಹಣಾ ಕೋಶ, ಕಾರ್ಖಾನೆ ಹಾಗೂ ಬಾಯ್ಲರ್‍ಗಳ ಇಲಾಖೆ ಮತ್ತು ನಂದಿ ಸಕ್ಕರೆ ಕಾರ್ಖಾನೆ ಇವರ ವತಿಯಿಂದ ಗಲಗಲಿಯ ನಂದಿ ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡಗಳಲ್ಲಿ ಜಾಗೃತಿ-ಅನುಸರಿಸಬೇಕಾದ ಕ್ರಮಗಳ ಕುರಿತು ಅಣುಕು ಪ್ರದರ್ಶನ ಹಮ್ಮಿಕೊಳ್ಳಲಾಯಿತು. ಜಿಲ್ಲಾಧಿಕಾರಿಗಳಾದ ಡಾ. ವಿಜಯಮಹಾಂತೇಶ ದಾನಮ್ಮನವರ ಅವರ ಮಾರ್ಗದರ್ಶನದಂತೆ ಅಣುಕು ಪ್ರದರ್ಶನ ನಡೆಸಲಾಯಿತು.
ಅಪಾಯದ ಸಂದರ್ಭದಲ್ಲಿ ಅನುಸರಿಸಬೇಕಾದ ಮುಂಜಾಗೃತಾ ಕ್ರಮಗಳು ಹಾಗೂ ತೆಗೆದುಕೊಳ್ಳಬೇಕಾದ ಸುರಕ್ಷತೆ ಕುರಿತು ನಂದಿ ಸಕ್ಕರೆ ಕಾರ್ಖಾನೆÀಯ ಸುಮಾರು 300ಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ಈ ಅಣುಕು ಪ್ರದರ್ಶನದ ಮೂಲಕ ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಕಾರ್ಖಾನೆ ಮತ್ತು ಬಾಯ್ಲರ್‍ಗಳ ಉಪನಿರ್ದೇಶಕ ವೆಂಕಟೇಶ ರಾಠೋಡ, ನಂದಿ ಸಕ್ಕರೆ ಕಾರ್ಖಾನೆಯ ಪ್ರಧಾನ ವ್ಯವಸ್ಥಾಪಕರಾದ ವೀರಣ್ಣಗೌಡ ದೇಸಾಯಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಶಾಖೆಯ ರಾಕೇಶ ಜೈನಾಪುರ ಸೇರಿದಂತೆ ಇತರರು ಉಪಸ್ಥಿತರಿದ್ದರು.