ಅಜಿತ್ ಪವಾರ್ ಸೇರಿ ಐವರ ವಿರುದ್ದ ಇಡಿ ಆರೋಪಪಟ್ಟಿ

ಮುಂಬೈ,ಜು.೩- ಬಿಜೆಪಿ-ಶಿವಸೇನೆ ಮೈತ್ರಿಕೂಟದಲ್ಲಿ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿರುವ ಅಜಿತ್ ಪವಾರ್ ಸೇರಿ ಐವರು ಎನ್‌ಸಿಪಿ ಸಚಿವರ ವಿರುದ್ದ ಜಾರಿ ನಿರ್ದೇಶನಲಾಯ ವಿವಿಧ ಪ್ರಕರಣಗಳ ತನಿಖೆ ನಡೆಸುತ್ತಿದ್ದು ಕೆಲವು ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲಾಗಿದೆ.
ಪ್ರಮುಖವಾಗಿ ಬ್ಯಾಂಕ್ ಸಾಲ ವಂಚನೆ,ಭ್ರಷ್ಟಾಚಾರ, ವಿವಿಧ ವಂಚನೆ ಭೂ ವ್ಯವಹಾರ, ಮಾದಕವಸ್ತು ಕಳ್ಳಸಾಗಣೆದಾರರಿಗೆ ಸಂಬಂಧಿಸಿದ ವ್ಯವಹಾರಗಳ ಪ್ರತ್ಯೇಕ ಹಣ ವರ್ಗಾವಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ.
ಅಜಿತ್ ಪವಾರ್ ವಿರುದ್ಧ ತನಿಖೆ ನಿರ್ಣಾಯಕ ಹಂತದಲ್ಲಿ ಜಾರಿ ನಿರ್ದೇಶನಾಲಯ ಬುಟ್ಟಿಗೆ ಬೀಳುವ ಸಾಧ್ಯತೆ ಹಿನ್ನೆಲೆಯಲ್ಲಿ ಬಿಜೆಪಿ ಮೈತ್ರಕೂಟದ ಭಾಗವಾಗಿದ್ದಾರೆ ಎಂದು ಹೇಳಲಾಗಿದೆ.
ಅಜಿತ್ ಪವಾರ್‍ಸಂಬಂಧಿತ ಸಕ್ಕರೆ ಕಾರ್ಖಾನೆಗಳಲ್ಲಿ ವಂಚನೆ ಆರೋಪದಡಿಯಲ್ಲಿ ಜಾರಿ ನಿರ್ದೇಶನಾಲಯ ಚಾರ್ಜ್‌ಶೀಟ್ ಸಲ್ಲಿಸಿತ್ತು. ಪವಾರ್ ಹೆಸರನ್ನು ಕೈಬಿಟ್ಟಿತ್ತು. ಮತ್ತೊಂದೆಡೆ ಮುಶ್ರಿಫ್ ಅವರು ತಮ್ಮ ವಿರುದ್ಧದ ಕ್ರಮ ರಾಜಕೀಯ ಸೇಡಿನ ಕ್ರಮ ಎಂದಿದ್ಧಾರೆ.
ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿರುವ ಛಗನ್ ಭುಜ್ ಬುಲ್ ವಿರುದ್ದ ೨೦೧೬ ರಿಂದ ನ್ಯಾಯಾಲಯದ ಮುಂದೆ ವಿಚಾರಣೆಗೆ ಬಾಕಿಯಿರುವ ಅವರ ವಿರುದ್ಧ ಆರೋಪಪಟ್ಟಿ ಸಲ್ಲಿಕೆಯಾಗಿದೆ. ಛಗನ್ ಭುಜ್ ಬಲ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಆರೋಪಪಟ್ಟಿ ಸಲ್ಲಿಸಿದೆ.
ರಾಜ್ಯ ಭ್ರಷ್ಟಾಚಾರ ನಿಗ್ರಹ ದಳದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ತನ್ನ ಪ್ರಕರಣದ ತನಿಖೆ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ.
ಮಹಾರಾಷ್ಟ್ರ ರಾಜ್ಯ ಸಹಕಾರಿ ಬ್ಯಾಂಕ್ ಪ್ರಕರಣದಲ್ಲಿ ಸಕ್ಕರೆ ಕಾರ್ಖಾನೆ ಖರೀದಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅಜಿತ್ ಪವಾರ್ ಅವರನ್ನು ಏಪ್ರಿಲ್‌ನಲ್ಲಿ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ ಜಾರಿ ನಿರ್ದೇಶನಾಲಯ ಆರೋಪ ಪಟ್ಟಿ ಸಲ್ಲಿಸಿದೆ.
ಹಣ ಲೇವಾದೇವಿ ಪ್ರಕರಣದಲ್ಲಿ ಭಾಗಿಯಾಗಿರುವ ಶಂಕಿತ ವ್ಯಕ್ತಿಗಳ ನಿರ್ದಿಷ್ಟ ಪಾತ್ರಗಳು ಮತ್ತು ಚಟುವಟಿಕೆಗಳ ತನಿಖೆಗೆ ಹೆಚ್ಚಿನ ಸಮಯ ತೆಗೆದುಕೊಳ್ಳುವ ಸಾಧ್ಯತೆಯಿದೆ.
ಅಜಿತ್ ಪವಾರ್ ಅವರನ್ನು ಎಂದಿಗೂ ವಿಚಾರಣೆಗೆ ಕರೆದಿಲ್ಲ. ಅಜಿತ್ ಪವಾರ್ ಸೇರಿದಂತೆ ಒಟ್ಟು ಐವರು ಎನ್ ಸಿಪಿಯ ಸಚಿವರು ಜಾರಿ ನಿರ್ದೇಶನಾಲಯದ ತನಿಖೆ ಎದುರಿಸುತ್ತಿದ್ದು ಅದರಿಂದ ಪಾರಾಗಲು ಬಿಜೆಪಿ ಜೊತೆ ಕೈಜೋಡಿಸಿದ್ದಾರೆ ಎನ್ನಲಾಗಿದೆ.