ಅಜೀಮ್ ಪ್ರೇಮಜಿ ಫೌಂಡೇಶನ್ ದಿಂದ ನೀಡಿದ 40 ಆಕ್ಸಿಜನ್ ಕಾನ್ಸಂಟ್ರೇಟರ್ ಜಿಲ್ಲಾ ಆಸ್ಪತ್ರೆಗೆ ಹಸ್ತಾಂತರ

ವಿಜಯಪುರ, ಮೇ.30-ಜಿಲ್ಲೆಯಲ್ಲಿ ಕಳೆದ ಏಪ್ರಿಲ್ ತಿಂಗಳಿನಿಂದ ಕೋವಿಡ್-19 ಸಾಂಕ್ರಾಮಿಕ ಸೋಂಕು ದಿನೇ ದಿನೇ ಹೆಚ್ಚುತ್ತಿರುವುದರಿಂದ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಆಸ್ಪತ್ರೆಗಳಲ್ಲಿ ಕೋವಿಡ್- 19 ಚಿಕಿತ್ಸೆ ಪಡೆಯುತ್ತಿರುವವರಿಗೆ ಆಮ್ಲಜನಕದ ಅವಶ್ಯಕತೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಗೆ ಕೆಲವು ವಿವಿಧ ಸಂಘ ಸಂಸ್ಥೆಗಳು ದಾನಿಗಳು ಸ್ವಯಂಪ್ರೇರಿತವಾಗಿ ಆಕ್ಸಿಜನ್ ಕಾನ್ಸೆಂಟ್ರೇಟರ್ ಗಳನ್ನು ಕೋವಿಡ್- 19 ಚಿಕಿತ್ಸೆಗಾಗಿ ನೀಡಿದ್ದು, ವಿವಿಧ ಆಸ್ಪತ್ರೆಗಳಿಗೆ ಹಸ್ತಾಂತರಿಸುತ್ತಿದೆ ಎಂದು ಜಿಲ್ಲಾಧಿಕಾರಿ ಪಿ. ಸುನಿಲ್ ಕುಮಾರ್ ಅವರು ತಿಳಿಸಿದ್ದಾರೆ.
ಅದರಂತೆ ಅಜೀಮ್ ಪ್ರೇಮ್ಜಿ ಫೌಂಡೇಶನ್ ಫಾರ್ ದೆವಲಪ್ಮೆಂಟ್ ಬೆಂಗಳೂರು, ಇವರ ವತಿಯಿಂದ 40 ಆಕ್ಸಿಜನ್ ಕಾನ್ಸೆಂಟ್ರೇಟರ್ ಗಳನ್ನು ಕೋವಿಡ್- 19 ರೋಗಿಗಳ ಚಿಕಿತ್ಸೆಗಾಗಿ ನೀಡಿದ್ದು, ಅದನ್ನು ಇಂದು ಜಿಲ್ಲಾ ಆಸ್ಪತ್ರೆಗೆ ಬಳಸಿಕೊಳ್ಳಲು ಹಸ್ತಾಂತರಿಸಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.