ಅಜ್ಜಾವರ ಗ್ರಾಮ ಪಂಚಾಯಿತಿಯಲ್ಲಿ ಟಾಸ್ಕ್ ಫೋರ್ಸ್ ಸಭೆ

ಸುಳ್ಯ, ಜೂ.೯- ಅಜ್ಜಾವರ ಗ್ರಾಮ ಪಂಚಾಯಿತಿ ಕೋವಿಡ್ ಕಾರ್ಯಪಡೆಯ ಸಭೆಯು ಮಂಗಳವಾರ ಗ್ರಾಮ ಪಂಚಾಯತಿನ ರಾಜೀವ ಗಾಂಧಿ ಸೇವಾ ಕೇಂದ್ರ ಸಭಾಭವನದಲ್ಲಿ ನಡೆಯಿತು.
ಗ್ರಾ.ಪಂ ಅಧ್ಯಕ್ಷೆ ಸತ್ಯವತಿ ಬಸವನಪಾದೆ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಲೀಲಾ ಮನಮೋಹನ, ಗ್ರಾಮ ಕರಣಿಕರಾದ ಶರತ್ ಕುಮಾರ್, ಪಂಚಾಯಿತಿ ಸದಸ್ಯರು, ಆರೋಗ್ಯ ಸಹಾಯಕಿಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಪಿ.ಡಿ.ಒ ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.
ಸಭೆಯಲ್ಲಿ ಕೋವಿಡ್ ೧೯ ನಿಯಂತ್ರಣಕ್ಕೆ ಲಸಿಕೆ ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಯಿತು ಹಾಗೂ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣಗಳ ಬಗ್ಗೆಯೂ ಕೂಡ ಸಭೆಯಲ್ಲಿ ಚರ್ಚಿಸಲಾಯಿತು.