‘ಅಟ್ಲಿ’ ಮೊದಲ ಹಂತ ಪೂರ್ಣ ಕಲಾವಿದರ ದೊಡ್ಡ ದಂಡು..

ಪ್ರಭುತ್ವ ಸೇರಿ ಹಲವು ಚಿತ್ರ ನಿರ್ದೇಶನ ಮಾಡಿರುವ ರಂಗನಾಥ್ ಆರ್ ನಿರ್ದೇಶನದ “ಅಟ್ಲಿ” ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ದ್ವಿತೀಯ ಹಂತದ ಚಿತ್ರೀಕರಣ ಸದ್ಯದಲ್ಲೇ ಆರಂಭವಾಗಲಿದೆ.

.ಇತ್ತೀಚಿಗೆ ಖ್ಯಾತ ನಟ – ನಿರ್ದೇಶಕ ರಿಷಬ್ ಶೆಟ್ಟಿ ಚಿತ್ರದ ಶೀರ್ಷಿಕೆ ಬಿಡುಗಡೆ ಮಾಡಿದ್ದರು. ಇದೀಗ ಹೊಸದಾಗಿ ಚಿತ್ರಕ್ಕೆ ಅಭಿಜಿತ್ ಸೇರ್ಪಡೆಯಾಗಿದ್ದಾರೆ.

ಚಿತ್ರರಂಗದಲ್ಲಿ ಕಳೆದ ಮೂರು ದಶಕಗಳಿಂದ ಅಭಿನಯದ ಮೂಲಕ ಕನ್ನಡಿಗರ ಮನಗೆದ್ದಿರುವ, ಫ್ಯಾಮಿಲಿ ಸ್ಟಾರ್ ಎಂದೇ ಖ್ಯಾತರಾಗಿರುವ ಅಭಿಜಿತ್ “ಅಟ್ಲಿ”ಯಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಹಿರಿಯ ಕಲಾವಿದೆಯರಾದ ಶೃತಿ,ಸ್ವಾತಿ ಸೇರಿದಂತೆ ದೊಡ್ಡ ಕಲಾವಿದರ ದಂಡೇ ಚಿತ್ರದಲ್ಲಿದೆ.

ಈ ಕುರಿತು ಮಾಹಿತಿ ಹಂಚಿಕೊಂಡ ಅಭಿಜಿತ್, ಪಾತ್ರ ತುಂಬಾ ಚೆನ್ನಾಗಿದೆ. ಮೊದಲ ಬಾರಿಗೆ ಮುಸ್ಲಿಂ ವ್ಯಕ್ತಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ತೊಂಭತ್ತರ ದಶಕದಲ್ಲಿ  ಹಿರಿಯ ನಟಿ ಶೃತಿ ಜೋಡಿಯಲ್ಲಿ ಬಿಡುಗಡೆಯಾಗಿದ್ದ  ಚಿತ್ರಗಳು ಪ್ರೇಕ್ಷಕರ ಮನ ಗೆದ್ದಿದೆ.  ಹಲವು ವರ್ಷಗಳ ನಂತರ  ಶೃತಿ ಜೊತೆ ಈ ಚಿತ್ರದಲ್ಲಿ ನಟಿಸಿರುವುದು ಸಂತೋಷ ತಂದಿದೆ ಎಂದಿದ್ದಾರೆ.

ಕಾಸರಗೋಡಿನ ಸುತ್ತಮುತ್ತ “ಅಟ್ಲಿ” ಕಥೆ ನಡೆಯುತ್ತದೆ.  ನಿರ್ದೇಶಕ ರಂಗನಾಥ್ ಅವರೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಈ ಹಿಂದೆ “ಅರಿವು”, “ಪ್ರಭುತ್ವ” ಚಿತ್ರಗಳನ್ನು ನಿರ್ದೇಶಿಸಿದ್ದ ರಂಗನಾಥ್ ಅವರಿಗೆ ಇದು ಮೂರನೇ ಚಿತ್ರ.

ಈ ಚಿತ್ರದ ನಾಯಕಿಯಾಗಿ ಪೂಜಾ ಜನಾರ್ದನ್ ನಟಿಸುತ್ತಿದ್ದಾರೆ. ಕೆ.ಜಿ.ಎಫ್ ಅನ್ ಮೋಲ್,  ಹಿರಿಯ ಕಲಾವಿದರಾದ ಶೃತಿ, ಅಭಿಜಿತ್, ಸ್ವಾತಿ,  ಅತುಲ್ ಕುಲಕರ್ಣಿ, ರವಿಕಾಳೆ, ನಾಜರ್, ಸುಪ್ರೀತ್, ಮನು ಮಯೂರ, ಲಲಿತಾ “ಅಟ್ಲಿ” ಚಿತ್ರದ ತಾರಾಬಳಗದಲ್ಲಿದ್ದಾರೆ.

ಚಿತ್ರದ ಮೂರು ಹಾಡುಗಳನ್ನು ಯೋಗರಾಜ್ ಭಟ್, ಡಾ.ವಿ.ನಾಗೇಂದ್ರಪ್ರಸಾದ್ ಹಾಗೂ ಬಹದ್ದೂರ್ ಚೇತನ್ ಕುಮಾರ್ ಬರೆದಿದ್ದಾರೆ. ಮಣಿಕಾಂತ್ ಕದ್ರಿ ಸಂಗೀತ, ಕೆ.ಎಸ್ ಚಂದ್ರಶೇಖರ್ ಛಾಯಾಗ್ರಹಣವಿದೆ.