ಅಡಕೆ ತೋಟದಲ್ಲಿ ಗಾಂಜಾ ಗಿಡ ಬೆಳೆದಿದ್ದ ಇಬ್ಬರು ಅರೆಸ್ಟ್!

ಸಂಜೆವಾಣಿ ವಾರ್ತೆ
ಶಿವಮೊಗ್ಗ, ಆ. 10: ಅಡಕೆ ತೋಟವೊಂದರಲ್ಲಿ ಗಾಂಜಾ ಗಿಡ ಬೆಳೆದಿದ್ದ ಆರೋಪದ ಮೇರೆಗೆಇಬ್ಬರನ್ನು ಪೊಲೀಸರು ಬಂಧಿಸಿದ ಘಟನೆ ತೀರ್ಥಹಳ್ಳಿ ತಾಲೂಕು ಕೋಣಂದೂರು ಸಮೀಪದ ಕೋಲಿಗೆ
ಗ್ರಾಮದಲ್ಲಿ ಆ. 9 ರಂದು ನಡೆದಿದೆ.ಕೋಲಿಗೆ ಗ್ರಾಮದ ನಿವಾಸಿಗಳಾದ ಸುನೀಲ್ (34) ಹಾಗೂ ಕಾರ್ತಿಕ್ (29) ಬಂಧಿತಆರೋಪಿಗಳೆಂದು ಗುರುತಿಸಲಾಗಿದೆ. ಖಚಿತ ವರ್ತಮಾನದ ಮೇರೆಗೆ ಪೊಲೀಸರು ತೋಟದ ಮೇಲೆ ದಾಳಿನಡೆಸಿದ್ದಾರೆ. ಈ ವೇಳೆ ಆರೋಪಿಗಳು ಅಡಕೆ ಗಿಡಗಳ ನಡುವೆ ಗಾಂಜಾ ಗಿಡ ಬೆಳೆದಿದ್ದುಪತ್ತೆಯಾಗಿದೆ.2 ಕೆಜಿ 164 ಗ್ರಾಂ ತೂಕದ ಹಸಿ ಗಾಂಜಾ ಗಿಡಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಇವುಗಳ ಮೌಲ್ಯ 80 ಸಾವಿರ ರೂ.ಗಳೆಂದು ಅಂದಾಜಿಸಲಾಗಿದೆ ಎಂದು ಪೊಲೀಸ್ ಇಲಾಖೆಯು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.ತೀರ್ಥಹಳ್ಳಿ ಡಿವೈಎಸ್ಪಿ ಗಜಾನನ ವಾಮನ ಸುತಾರ ನೇತೃತ್ವದಲ್ಲಿ ಇನ್ಸ್’ಪೆಕ್ಟರ್ಅಶ್ವತ್ ಗೌಡ, ಸಬ್ ಇನ್ಸ್’ಪೆಕ್ಟರ್ ಗಾದಿ ಲಿಂಗಪ್ಪ ಗೌಡರ್ ಮತ್ತವರ ಸಿಬ್ಬಂದಿಗಳ ತಂಡ ಈ ಕಾರ್ಯಾಚರಣೆ ನಡೆಸಿದೆ.ಬಂಧಿತ ಆರೋಪಿಗಳ ವಿರುದ್ದ ಎನ್.ಡಿ.ಪಿ.ಎಸ್ ಕಾಯ್ದೆ ಕಲಂ 8 (ಎ), 20 (ಎ) (ಐ)ಕಾಯ್ದೆಯಡಿ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.