ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

ಹುಬ್ಬಳ್ಳಿ,ಮಾ.3: ವಾಣಿಜ್ಯ ಬಳಕೆಯ ಹಾಗೂ ಅಡುಗೆ ಅನಿಲದ ಬೆಲೆ ಹೆಚ್ಚಳ ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಇಂದು ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಮಿನಿವಿಧಾನಸೌಧ ಬಳಿ ಪ್ರತಿಭಟನೆ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕೂಡಲೇ ವತಿಯಿಂದ ಬೆಲೆ ಏರಿಕೆಯನ್ನು ಇಳಿಸಬೇಕು ದೇಶದ ಜನರಿಗೆ ಅಚ್ಚೆ ದಿನ್ ಹೆಸರಿನಲ್ಲಿ ಮೋಸ ಮಾಡುತ್ತಿರುವ ನರೇಂದ್ರ ಮೋದಿ ಸರ್ಕಾರ ತೊಲಗಬೇಕು ಎಂದು ಖಾಲಿ ಗ್ಯಾಸ್ ಸಿಲಿಂಡರ್ ಹೊತ್ತು ಪ್ರತಿಭಟನೆ ನಡೆಸಲಾಯಿತು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ನಿರಂತರವಾಗಿ ಅಡುಗೆ ಅನಿಲ ದರವನ್ನು ಏರಿಸುತ್ತಲೇ ಇದೆ. ದೇಶದ ಜನರಿಗೆ ಅಚ್ಛೇದೀನ್ ಎಂಬ ಆಸೆಯನ್ನು ಹುಟ್ಟಿಸಿ ಜನರನ್ನ ಮೋಸಗೊಳಿಸುತ್ತಿರುವ ದೇಶದ ಪ್ರಥಮ ಪ್ರಧಾನಿ ಎಂದರೆ ಅದು ನರೇಂದ್ರ ಮೋದಿ ಎಂದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ನಿತ್ಯ ಅಗತ್ಯ ವಸ್ತುಗಳ ಬೆಲೆ ಏರಿಸುತ್ತಿರುವ ನರೇಂದ್ರ ಮೋದಿ ಸರ್ಕಾರ ಬೆಲೆಯನ್ನು ಇಳಿಸುವ ಒಂದು ಅಂಶದ ಕಾರ್ಯಕ್ರಮವನ್ನು ಇಲ್ಲಿವರೆಗೂ ಸಹ ರೂಪಿಸಿಲ್ಲ ಎಂದು ಕಾರ್ಯಕರ್ತರು ದೂರಿದರು. ಈ ಕೂಡಲೇ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಇಳಿಸಬೇಕೆಂದು ಒತ್ತಾಯಿಸಿ ತಹಶಿಲ್ದಾರರ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.