ಅಡುಗೆ ಸಹಾಯಕರಿಗೆ ಸಂಬಳಕ್ಕೆ ಆಗ್ರಹಿಸಿ ಪ್ರತಿಭಟನೆ

ಧಾರವಾಡ,ಸೆ.22: ಹೊರ ಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವ ಅಡುಗೆ ಸಹಾಯಕರಿಗೆ ಮೂರು ತಿಂಗಳ ಸಂಬಳ ನೀಡಬೇಕು ಎಂದು ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಧಾರವಾಡ ಜನಜಾಗೃತಿ ಸಂಘದ ನೇತೃತ್ವದಲ್ಲಿ ಅಡುಗೆ ಸಹಾಯಕರು ಪ್ರತಿಭಟನೆ ನಡೆಸಿ ಧಾರವಾಡ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಸುಮಾರು 150 ಹೊರ ಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವ ಅಡುಗೆ ಸಹಾಯಕರಿಗೆ ಮೂರು ತಿಂಗಳ ಸಂಬಳ ಬಾಕಿ ಉಳಿದಿರುವ ಹಿನ್ನೆಲೆಯಲ್ಲಿ ಅಡುಗೆ ಸಹಾಯಕರಿಗೆ ಜೀವನ ನಡೆಸಲು ಕಷ್ಟವಾಗುತ್ತಿದ್ದು ಕೂಡಲೇ ಜಿಲ್ಲಾಡಳಿತ ಎಚ್ಚೆತ್ತು ಸಂಬಳ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಜನ ಜಾಗೃತಿ ಸಂಘದ ಅಧ್ಯಕ್ಷ ಬಸವರಾಜ ಕೊರವರ, ಸಾಮಾಜಿಕ ಹೋರಾಟಗಾರ ಮಹಾದೇವ ದೊಡ್ಡಮನಿ, ನಾಗರಾಜ ಕಿರಣಗಿ, ರಾಘವೇಂದ್ರ ಶೆಟ್ಟಿ, ಸುರೇಶ ಕೋಳ್ಳುರ, ನಜ್ಮಾ ರಾಟಿ, ಸರಸ್ವತಿ ಹಂಚಿನಹಳ್ಳಿ ಸೇರಿದಂತೆ ಹಲವರು ಭಾಗವಹಿಸಿದ್ದರು.