ಅಡ್ಕಾರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಸುಳ್ಯ, ಸೆ.೨೨- ಕಾಸರಗೋಡಿನಿಂದ ಸುಳ್ಯ ಕಡೆಗೆ ಬರುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಜಾಲ್ಸೂರು ಗ್ರಾಮದ ಅಡ್ಕಾರಿನಲ್ಲಿ ಮಂಗಳವಾರ ಸಂಭವಿಸಿದೆ. ಮಳೆ ಬರುತ್ತಿದ್ದ ಸಂದರ್ಭದಲ್ಲಿ ಕಾರು ಚಾಲಕನ ನಿಯಂತ್ರಣಕ್ಕೆ ಬಾರದೆ ಪಲ್ಟಿಯಾಗಿದ್ದು , ಕಾರಿನಲ್ಲಿದ್ದ ಎಲ್ಲರೂ ಅಪಾಯದಿಂದ |
ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.