ಅಡ್ಕಾರು: ಭೂಮಿ ಸುಪೋಷಣ್ ಪ್ರಕೃತಿ ವಂದನಾ ಕಾರ್ಯಕ್ರಮ

ಸುಳ್ಯ, ಮೇ ೩೧-ಸುಳ್ಯ ಸೇವಾ ಭಾರತಿ, ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ, ಪುತ್ತೂರು ವಲಯ ಅರಣ್ಯ ಇಲಾಖೆ ಇದರ ವತಿಯಿಂದ ಭೂಮಿ ಸುಪೋಷಣ್, ಪ್ರಕೃತಿ ವಂದನಾ ಕಾರ್ಯಕ್ರಮವು ಜಾಲ್ಸೂರು ಗ್ರಾಮದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ವಠಾರದಲ್ಲಿ ಭಾನುವಾರ ನಡೆಯಿತು.
ವಲಯ ಅರಣ್ಯ ಸಂರಕ್ಷಣಾ ಅಧಿಕಾರಿ ಕಾರ್ಯಪ್ಪ ಉದ್ಘಾಟಿಸಿದರು. ವಲಯ ಅರಣ್ಯ ಅಧಿಕಾರಿ ಸುಬ್ಬಯ್ಯ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಂತ ಸೇವಾ ಪ್ರಮುಖ್ ನ.ಸೀತಾರಾಮ, ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಮೋಕ್ತೇಸರ ಗುರುರಾಜ್ ಭಟ್ ಅಡ್ಕಾರು, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಯರಾಮ ರೈ ಜಾಲ್ಸೂರು, ಕನಕಮಜಲು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಡಾ.ಗೋಪಾಲಕೃಷ್ಣ ಭಟ್,
ವಿವೇಕನಂದ ವಿದ್ಯಾಸಂಸ್ಥೆಯ
ಸಂಚಾಲಕ ಸುಧಾಕರ ಕಾಮತ್ ವಿನೋಬನಗರ, ಕಣ್ವ ವೃಕ್ಷ ಸಂವರ್ಧನಾ ಚಾರಿಟೇಬಲ್ ಟ್ರಸ್ಟ್ ಅದ್ಯಕ್ಷ ಪುರುಷೋತ್ತಮ ಕಿರ್ಲಾಯ ರಾಷ್ಟ್ರೀಯ ಸ್ವಯಂಸೇವಕ ಸಂಘದ ದ.ಕ. ಜಿಲ್ಲಾ ಸಹ ಕಾರ್ಯವಾಹ ಡಾ.ಮನೋಜ್ ಅಡ್ಡಂತ್ತಡ್ಕ, ವಿವಿದ ಸಂಘಟನೆಯ ಜವಾಬ್ದಾರಿಯುತ ಕಾರ್ಯಕರ್ತರು ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸ್ವಯಂ
ಸೇವಕರು ಉಪಸ್ಥಿತರಿದ್ದರು.