ಅಡ್ವಾಣಿಗೆ ಮೋದಿ ಶುಭಾಶಯ

ನವದೆಹಲಿ, ನ ೮- ಬಿಜೆಪಿಯ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಅವರ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ.

೯೩ ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ “ಹಿರಿಯರಾದ ಅಡ್ವಾಣಿ ಬಿಜೆಪಿ ಕಾರ್ಯಕರ್ತರಿಗೆ ಮತ್ತು ದೇಶವಾಸಿಗಳಿಗೆ ಜೀವಂತ ಸ್ಫೂರ್ತಿ” ಎಂದು ಅವರು ಹೇಳಿದ್ದಾರೆ.

ಹಿಂದಿ ಭಾಷೆಯಲ್ಲಿ ಮಾಡಿದ ಟ್ವೀಟ್‌ನಲ್ಲಿ ಮೋದಿ, ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಸರ್ಕಾರದಲ್ಲಿ ಗೃಹ ಸಚಿವ ಮತ್ತು ಉಪ ಪ್ರಧಾನ ಮಂತ್ರಿಯಾಗಿದ್ದ ಅಡ್ವಾಣಿ ದೇಶದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ ಮತ್ತು ಪಕ್ಷವನ್ನು ಜನಸಾಮಾನ್ಯರತ್ತ ಕೊಂಡೊಯ್ದಿದ್ದಾರೆ. ಕೋಟ್ಯಂತರ ಬಿಜೆಪಿ ಕಾರ್ಯಕರ್ತರಿಗೆ ಮತ್ತು ದೇಶವಾಸಿಗಳಿಗೆ ಅವರು “ಜೀವಂತ ಸ್ಫೂರ್ತಿ” ಎಂದಿದ್ದಾರೆ. ಇದೇ ವೇಳೆ ಅಡ್ವಾಣಿಯವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಹಾರೈಸಿದ್ದಾರೆ.
ಇದೇ ವೇಳೆ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿಯ ಇತರ ಮುಖಂಡರು ಶುಭಾಶಯ ಕೋರಿದರು.