ಅತಿಥಿ ಉಪನ್ಯಾಸಕನ ಭೀಕರ ಕೊಲೆ

ಕಲಬುರಗಿ,ಏ.15-ಮಾರಕಾಸ್ತ್ರಗಳಿಂದ ಹೊಡೆದು ಅತಿಥಿ ಉಪನ್ಯಾಸಕರೊಬ್ಬರನ್ನು ಕೊಲೆ ಮಾಡಿರುವ ಘಟನೆ ಕುಸನೂರ ರಸ್ತೆಯಲ್ಲಿ ನಡೆದಿದೆ.
ರವಿ ಪಟ್ಟೇದಾರ ಕೊಲೆಯಾದವರು. ಚಿತ್ತಾಪುರ ಸರ್ಕಾರಿ ಪದವಿ ಕಾಲೇಜಿನಲ್ಲಿ ಇವರು ಅತಿಥಿ ಉಪನ್ಯಾಸಕರಾಗಿದ್ದರು ಎಂದು ತಿಳಿದುಬಂದಿದೆ.
ಬೈಕ್ ಅಡ್ಡಗಟ್ಟಿ ಕೆಳಗೆ ಕೆಡವಿ ಬೆನ್ನಟ್ಟಿ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಕೊಲೆಗೆ ನಿಖರ ಕಾರಣವಿನ್ನೂ ತಿಳಿದುಬಂದಿಲ್ಲ.
ಸುದ್ದಿ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.