ಅತಿಥಿ ಉಪನ್ಯಾಸಕರ ಐದು ತಿಂಗಳ ವೇತನ ಬಿಡುಗಡೆ

ಬೆಂಗಳೂರು,ನ.13- ರಾಜ್ಯಸಲ್ಲಿ ಅತಿಥಿ ಉಪನ್ಯಾಸಕರ 5 ತಿಂಗಳ ಬಾಕಿ ವೇತನವನ್ನು ಸರ್ಕಾರ ಬಿಡುಗಡೆ ಮಾಡಿದೆ.

ಅತಿಥಿ ಉಪನ್ಯಾಸಕರ ಆರ್ಥಿಕ ಭದ್ರತೆ ಹಾಗೂ ಹಿತರಕ್ಷಣೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ನೇತೃತ್ವದ ನಮ್ಮ ಸರ್ಕಾರ ಸದಾ ಬದ್ಧವಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವಥ್ ನಾರಾಯಣ್ ಹೇಳಿದ್ದಾರೆ.

ಈ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಅವರು,ಅತಿಥಿ ಉಪನ್ಯಾಸಕರ ಹಿತ ಕಾಪಡಿವುದಾಗಿ ಪುನರುಚ್ಚರಿಸಿದ್ದಾರೆ.