ಅತಿಥಿ ಉಪನ್ಯಾಸಕರ ನೇಮಕಕ್ಕೆ ಆದೇಶ- ಸಂಕನೂರ

ಧಾರವಾಡ ಮಾ.20-ರಾಜ್ಯದಲ್ಲಿ 2020-21 ನೇ ಶೈಕ್ಷಣಿಕ ವರ್ಷಕ್ಕೆ ಖಾಲಿ ಇರುವ ಅವಶ್ಯಕ ಉಪನ್ಯಾಸಕರನ್ನು ವಿಷಯವಾರು 1835 ಅತಿಥಿ ಉಪನ್ಯಾಸಕರ ನೇಮಕಾತಿಗೆ ಸರಕಾರ ಒಪ್ಪಿಗೆ ಸೂಚಿಸಿ ದಿನಾಂಕ 19-03-2021 ಸರಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ ಎಂದು ವಿಧಾನ ಪರಿಷತ್ತ ಸದಸ್ಯರಾದ ಎಸ್.ವ್ಹಿ. ಸಂಕನೂರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯದ ಸರಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಒಟ್ಟು ಖಾಲಿರುವ 3407 ಹುದ್ದೆಗಳಲಿ ಕೋವಿಡ್ ಹಿನ್ನೆಲೆಯಲ್ಲಿ ಆರ್ಥಿಕ ಮುಗ್ಗಟ್ಟಿನಿಂದ 1835 ಅತಿಥಿ ಉಪನ್ಯಾಸಕರನ್ನು ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ನೇಮಕ ಮಾಡಿಕೊಳ್ಳು ಸರಕಾರ ಆಧೇಶ ಹೊರಡಿಸಿದೆ. ಹಾಗೂ ಎರಡು ಮೂರು ತಿಂಗಳಲ್ಲಿ ಪರೀಕ್ಷೆ ಇರುವುದರಿಂದ ವಿದ್ಯಾರ್ಥಿಗಳಿಗೆ ಅನುಕೂವಾಗುವ ನಿಟ್ಟಿನಲ್ಲಿ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿರುವುದು ಸ್ವಾಗತಾರ್ಯ ಎಂದು ವಿಧಾನ ಪರಿಷತ್ತ ಸದಸ್ಯರಾದ ಎಸ್,ವ್ಹಿ ಸಂಕನೂರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.