ಅತಿಥಿ ಉಪನ್ಯಾಸಕರ ವೇತನ ಪಾವತಿಗೆ ರಜಾಕ್ ಉಸ್ತಾದ್ ಒತ್ತಾಯ

ರಾಯಚೂರು,ನ.೧೩- ಸರ್ಕಾರಿ ಇಂಜಿನೀಯರಿಂಗ್ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಕಳೆದ ಡಿಸೆಂಬರ್ 2019 ರಿಂದ ಬಾಕಿ ಇರುವ ಗೌರವಧನ ಬಿಡುಗಡೆ ಮಾಡಬೇಕು ಮತ್ತು ಅವರಿಗೆ ಸೇವಾ ಭದ್ರತೆ ಒದಗಿಸಬೇಕೆಂದು ಒತ್ತಾಯಿಸಿ ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿ ಉಪಾಧ್ಯಕ್ಷ ರಜಾಕ್ ಉಸ್ತಾದ್ ಉನ್ನತ ಶಿಕ್ಷಣ ಸಚಿವ ಹಾಗೂ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ ಅವರಗೆ ಒತ್ತಾಯಿಸಿದ್ದಾರೆ.
ಈ ಕುರಿತು ಸಚಿವರನ್ನು ಭೇಟಿ ಮಾಡಿ ಮನವಿ‌ ಸಲ್ಲಿಸಿದ ಅವರು ಕಳೆದ ಡಿಸೆಂಬರ 2019ರಿಂದ ಸರಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಗೌರವಧನ ಪಾವತಿಸಿಲ್ಲ ಇದರಿಂದ ಅತಿಥಿ ಉಪನ್ಯಾಸಕರ ಜೀವನ ನಿರ್ವಹಣೆಗೆ ಆರ್ಥಿಕ ಸಂಕಷ್ಟ ಉಂಟಾಗಿದ್ದು, ಕೂಡಲೇ ಸರ್ಕಾರ ಇದನ್ನರಿತು ಗೌರವಧನ ಬಿಡುಗಡೆ ಮಾಡಬೇಕು ಮತ್ತು ಕಾಲೇಜು ಶಿಕ್ಷಣ ಇಲಾಖೆಯ ಅತಿಥಿ ಉಪಾನ್ಯಾಸಕರಂತೆ ಪರಿಗಣಿಸಿ ಸೇವಾ ಮಾನದಂಡಗಳನ್ನು ಅನ್ವಯಿಸಬೇಕೆಂದು ಒತ್ತಾಯಿಸಿದರು.