ಅತಿವೃಷ್ಟಿ ಸಂದರ್ಭದಲ್ಲಿ ಸನ್ನದ್ಧವಾಗಿರಲು ಸಚಿವರ ಸೂಚನೆ

ಹುಬ್ಬಳ್ಳಿ, ಜು 14: ಮಳೆಯ ಪ್ರಮಾಣ ಯಾವುದೇ ಸಂದರ್ಭದಲ್ಲಿ ಹೆಚ್ಚಾದರೂ ಕೂಡ ಪರಿಸ್ಥಿತಿಯನ್ನು ನಿರ್ವಹಿಸಲು ಆಡಳಿತ ಯಂತ್ರ ಸದಾಕಾಲ ಸನ್ನದ್ಧವಾಗಿರಬೇಕು.ಈಗಾಗಲೇ ತಾಲೂಕುವಾರು ನೇಮಕಗೊಂಡಿರುವ ನೋಡಲ್ ಅಧಿಕಾರಿಗಳು, ಸ್ಥಳೀಯ ತಹಸೀಲ್ದಾರರು ಇತರ ಎಲ್ಲಾ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿಕೊಂಡು ತ್ವರಿತ ಪರಿಹಾರ ಒದಗಿಸಬೇಕು ಎಂದು ಗಣಿ, ಭೂವಿಜ್ಞಾನ, ಮಹಿಳಾ, ಮಕ್ಕಳ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಹೇಳಿದರು.
ಅತಿವೃಷ್ಟಿ ಬಾಧಿತ ಜಿಲ್ಲೆಯ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ನಗರದ ಸರ್ಕ್ಯೂಟ್ ಹೌಸಿನಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಅತಿವೃಷ್ಟಿ ಪರಿಹಾರ ಕಾರ್ಯ ಪರಿಶೀಲಿಸಿ ಮಾತನಾಡಿದರು.
ಕೃಷಿ,ತೋಟಗಾರಿಕೆ,ಪಶುಸಂಗೋಪನೆ,ಪಂಚಾಯತರಾಜ್ ಇಂಜಿನಿಯರಿಂಗ್ ವಿಭಾಗ ,ಲೋಕೋಪಯೋಗಿ,ಮಹಾನಗರಪಾಲಿಕೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಕೈಗೊಂಡಿರುವ ಅತಿವೃಷ್ಟಿ ಪರಿಹಾರದ ಮಾಹಿತಿ ಸಭೆಗೆ ನೀಡಿದರು.

ಶಾಸಕರಾದ ಅರವಿಂದ ಬೆಲ್ಲದ, ಅಮೃತ ದೇಸಾಯಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಹುಬ್ಬಳ್ಳಿ ಧಾರವಾಡ ಪೆÇಲೀಸ್ ಆಯುಕ್ತ ಲಾಬೂರಾಮ್, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಲೋಕೇಶ್ ಜಗಲಾಸರ್ ,ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸುರೇಶ ಇಟ್ನಾಳ ಸೇರಿದಂತೆ ಜಿಲ್ಲೆಯ ಎಲ್ಲಾ ತಹಸೀಲ್ದಾರರು,ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಇದ್ದರು.