ಅತಿ ಭ್ರಷ್ಟ ಬಿಜೆಪಿ ಸರ್ಕಾರ : ಡಿಕೆಶಿ ಟೀಕೆ

ಕಲಬುರಗಿ, ನ. ೨೨- ದೇಶದಲ್ಲಿನ ರಾಜ್ಯ ಸರ್ಕಾರಗಳ ಪೈಕಿ ಕರ್ನಾಟಕದಲ್ಲಿನ ಬಿಜೆಪಿ ಸರ್ಕಾರ ಅತಿ ಭ್ರಷ್ಟ ಸರ್ಕಾರ ಎಂದು ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಟೀಕಿಸಿದ್ದಾರೆ.
ಕಾಮಗಾರಿ ಗುತ್ತಿಗೆ ನೀಡುವ ಸಂಬಂಧ ಸಚಿವರು, ಅಧಿಕಾರಿಗಳು ಒಟ್ಟಾರೆ ಮೊತ್ತದಲ್ಲಿ ಪರ್ಸಂಟೇಜ್ ಕೇಳುವ ಬಗ್ಗೆ ಗುತ್ತಿಗೆದಾರರ ಸಂಘದ ಅಧ್ಯಕ್ಷರು, ಪ್ರಧಾನಿಗೆ ಪತ್ರ ಬರೆದಿರುವ ಬಗ್ಗೆ ತನಿಖೆ ನಡೆಸಬೇಕೆಂದು ಅವರು ಆಗ್ರಹಿಸಿದರು.
ಸರ್ಕಾರದ ವಿರುದ್ಧ ಗುತ್ತಿಗೆದಾರರು ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಸದ್ಯದಲ್ಲೇ ರಾಜ್ಯಪಾಲರನ್ನು ಭೇಟಿಮಾಡಿ ತನಿಖೆ ನಡೆಸಲು ಆಗ್ರಹಿಸಲಾಗುವುದು ಎಂದು ಸುದ್ದಿಗಾರರಿಗೆ ಇಂದು ತಿಳಿಸಿದರು.
ರಾಜ್ಯದಲ್ಲೆಡೆ ಸುರಿದ ಅಕಾಲಿಕ iಳೆಯಿಂದ ಬೆಳೆ ಹಾನಿಯಾಗಿ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಸರ್ಕಾರ ತಕ್ಷಣ ಪರಿಹಾರ ನೀಡಬೇಕೆಂದು ಅವರು ಆಗ್ರಹಿಸಿದರು.
ಕಾಂಗ್ರೆಸ್‌ನಲ್ಲಿ ಯಾವುದೇ ಬಣಗಳಿಲ್ಲ, ಇರುವುದೊಂದೇ ಕಾಂಗ್ರೆಸ್ ಬಣ ಎಂದವರು ಹೇಳಿದರು.
ಕಾಂಗ್ರೆಸ್ ಬಗ್ಗೆ ಮಾತನಾಡದಿದ್ದರೆ ಬಿಜೆಪಿಯವರಿಗೆ ನಿದ್ದೆನೇ ಬರಲ್ಲ. ಹೀಗಾಗಿ ಪ್ರತಿನಿತ್ಯ ಏನಾದರೊಂದು ಕಾಂಗ್ರೆಸ್ ಬಗ್ಗೆ ಮಾತನಾಡುತ್ತಿರುತ್ತಾರೆ ಎಂದವರು ಹೇಳಿದರು.
ರಾಜ್ಯ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಯ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಪ್ರಕಟಿಸಲಾಗುವುದು. ೨೦ ಸ್ಥಾನಗಳಿಗೂ ಕಾಂಗ್ರೆಸ್ ಸ್ಪರ್ಧಿಸುವ ಅಧಿಕೃತ ಅಭ್ಯರ್ಥಿ ವಿರುದ್ಧ ಂಡಾಯವಾಗಿ ಯಾರಾದರೂ ಸ್ಪರ್ಧಿಸಿದರೆ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗುವುದು ಎಂದು ಅವರು ಎಚ್ಚರಿಸಿದರು.