ಅತೃಪ್ತರ ಮನವೊಲಿಕೆ: ಬಿಎಸ್‌ವೈ

ಬೆಂಗಳೂರು,ಏ.೧೩:ಟಿಕೆಟ್ ಕೈತಪ್ಪಿರುವರನ್ನು ಕರೆದು ಮಾತನಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿಗಳ ೨ನೇ ಪಟ್ಟಿಯೂ ಘೋಷಣೆಯಾಗಿದೆ. ಅಸಮಾಧಾನಗೊಂಡಿರುವವರ ಮನವೊಲಿಸುವ ಕೆಲಸ ಮಾಡುತ್ತಿದ್ದೇವೆ ಎಂದರು.
ಅಸಮಾಧಾನಗೊಂಡಿರುವ ಲಕ್ಷ್ಮಣ ಸವದಿ ಅವರನ್ನು ಕರೆದು ಮಾತನಾಡುತ್ತೇನೆ ಎಂದು ಹೇಳಿದ ಅವರು, ಶಾಸಕ ಎಂ.ಪಿ ಕುಮಾರಸ್ವಾಮಿ ಅವರನ್ನು ಕರೆದು ಮಾತನಾಡುತ್ತೇನೆ. ಕುಮಾರಸ್ವಾಮಿ ಅವರಿಗೆ ಪಕ್ಷ ಎಲ್ಲ ಕೊಟ್ಟಿದೆ. ಏನು ಕಡಿಮೆ ಮಾಡಿದ್ದೇವೆ ಎಂದರು.
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ರವರಿಗೂ ಟಿಕೆಟ್ ಸಿಗುತ್ತದೆ. ಇಂದು ಸಂಜೆಯೊಳಗೆ ಎಲ್ಲವೂ ಇತ್ಯರ್ಥವಾಗುತ್ತದೆ ಎಂದು ಯಡಿಯೂರಪ್ಪ ಹೇಳಿದರು.