ಅತ್ತಿಗೆರೆಯಲ್ಲಿ ಅಂಬೇಡ್ಕರ್‌ ಜಯಂತಿ

ದಾವಣಗೆರೆ, ಏ.17- ತಾಲ್ಲೂಕಿನ ಅತ್ತಿಗೆರೆ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ 132ನೇ ಜಯಂತಿಯನ್ನು ಆಚರಿಸಲಾಯಿತು.ಈ ವೇಳೆ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಕುಂದುವಾಡ ಮಂಜುನಾಥ್, ಮಹಿಳಾ ಒಕ್ಕೂಟದ ವಿಜಯಮ್ಮ, ತಾಲ್ಲೂಕು ಸಂಚಾಲಕ ಅಣಜಿ ಹನುಮಂತಪ್ಪ, ಬನ್ನಿಹಟ್ಟಿ ನಿಂಗಪ್ಪ, ಮಂಜುನಾಥ್ ಎಲೆಕ್ಟ್ರಿಕಲ್ ಸೇರಿದಂತೆ ಗ್ರಾಮದ ಮುಖಂಡರು, ಮಹಿಳೆಯರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.