ಅತ್ಯಧಿಕ ಸ್ಥಾನಗಳಲ್ಲಿ ಬಿಜೆಪಿಗೆ ಜಯ – ಬಿ.ಎಸ್.ಯಡಿಯೂರಪ್ಪ ಆತ್ಮವಿಶ್ವಾಸ

ಸಂಜೆವಾಣಿ ವಾರ್ತೆ

ಶಿವಮೊಗ್ಗ, ಮೇ ೩೦:  ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಬಿಜೆಪಿ 20-22 ಸ್ಥಾನ ಗೆಲ್ಲುವುದು ನಿಶ್ಚಿತ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ.ಶಿವಮೊಗ್ಗದ ಸ್ವಗೃಹದಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆಯ ಬಿಜೆಪಿ ಅಭ್ಯರ್ಥಿ ಡಾ.ಸರ್ಜಿ ಪರ ಒಳ್ಳೆಯ ಅಭಿಪ್ರಾಯವಿದೆ. ಪರಿಷತ್ ಚುನಾವಣೆಯಲ್ಲಿ ಹೆಚ್ಚಿನ ಸೀಟು ಗೆದ್ದೇ ಗೆಲ್ತೀವಿ ಎಂದರು.ಮಾಜಿ ಶಾಸಕ ರಘುಪತಿ ಭಟ್ಟರು ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಪಕ್ಷೇತರವಾಗಿ ಸ್ಪರ್ಧಿಸುತ್ತಿರುವ ಬಗ್ಗೆ ಮಾತನಾಡಿರುವ ಬಿಎಸ್ ವೈ ಅವರ ಬಗ್ಗೆ ಹೆಚ್ಚಿನ ಮಾತನಾಡುವುದಿಲ್ಲ. ಪಕ್ಷ ಎಲ್ಲವನ್ನೂ ನೀಡಿದೆ. ಆದರೆ ಹಠಕ್ಕೆ ಬಿದ್ದು ಸ್ಪರ್ಧಿಸುತ್ತಿದ್ದಾರೆ. ಜನ ಸೂಕ್ತ ನಿರ್ಧಾರ ಕೈಗೊಳ್ತಾರೆ ಎಂದರು.ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ವಿಷಯ ಒಂದು ದುರ್ದೈವದ ವಿಷಯವಾಗಿದೆ. ಹಲವಾರು ಅಧಿಕಾರಿಗಳ ಬಗ್ಗೆ ಹೆಸರು ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾನೂನು ಕ್ರಮ ಕೈಗೊಳ್ಳಬೇಕು. ಸಚಿವ ನಾಗೇಂದ್ರ ಅವರ ರಾಜೀನಾಮೆಯನ್ನ ಕೇಳುತ್ತಿದ್ದಾರೆ. ಆದರೆ ಅವರೇ ತಿಳಿದು ರಾಜೀನಾಮೆ ಕೊಡುವುದು ಸೂಕ್ತ ಎಂದರು‌.