
ಕಲಬುರಗಿ ;ಜು.19: ಜಿಲ್ಲೆಯ ಆಳಂದ ತಾಲ್ಲೂಕಿನ ದೇವಂತಗಿ ಗ್ರಾಮದಲ್ಲಿ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಆರೋಪಿಗಳಿಗೆ ಗಲ್ಲು ಶಿಕ್ಷೆಯನ್ನು ವಿಧಿಸಬೇಕೆಂದು ದಲಿತ ಚಳುವಳಿಯ ರಾಜ್ಯ ಸಂಚಾಲಕ ರವಿ ಮದನಕರ್ ಸರ್ಕಾರಕ್ಕೆ ಆಗ್ರಹಿಸಿದರು.
ದೇಶದಲ್ಲಿ ಪ್ರತಿದಿನ ಇಂಥಹ ಘಟನೆಗಳು ನಡೆಯುತ್ತಿದ್ದರೂ ಅಪರಾಧಿಗಳ ವಿರುದ್ಧ ಹೊಸ ಕಠಿಣ ಕಾನೂನು ತಂದು ಅತ್ಯಾಚಾರ ಆರೋಪಿಗಳಿಗೆ ತ್ವರಿತಗತಿಯಲ್ಲಿ ಕಾನೂನು ರೀತಿಯಲ್ಲಿ ಕಠಿಣ ಕ್ರಮ ಜರುಗಿಸಿ ಶಿಕ್ಷೆ ನೀಡುವ ಮೂಲಕ ಅನ್ಯಾಯಕ್ಕೊಳಗಾದವರಿಗೆ ನ್ಯಾಯ ದೊರಕಿಸುವ ಮೂಲಕ ಸರ್ಕಾರ ನೂತನ ಕಾನೂನು ತರಬೇಕೆಂದು ಮದನಕರ್ ಸರ್ಕಾರಕ್ಕೆ ಮನವಿ ಮಾಡಿದರು.
ರಾಜ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದೆ ಹಾಗೆ ಸರ್ಕಾರ ಎಚ್ಚೆತ್ತುಕೊಳ್ಳಬೇಕು. ಸಂತ್ರಸ್ತೆ ಕುಟುಂಬಕ್ಕೆ ಸರ್ಕಾರದ ವತಿಯಿಂದ ಸೂಕ್ತ ಪರಿಹಾರ ಒದಗಿಸಬೇಕೆಂದು ಸಮಿತಿ ರಾಜ್ಯ ಸಂಚಾಲಕ ರವಿ ಮದನಕರ್ ರಾಜ್ಯ ಸರ್ಕಾರಕ್ಕೆ ಆಗ್ರಹ ಮಾಡಿದರು.