ಅಥಣಿಯ ವಿಕಲಚೇತನ ಸಾಹಿತಿ ಹನುಮಂತನಿಗೆ ರಾಜ್ಯಮಟ್ಟದ ಪ್ರಶಸ್ತಿ ಪ್ರಧಾನ

ಅಥಣಿ : ತಾಲೂಕಿನ ಬಳ್ಳಿಗೇರಿ ಗ್ರಾಮದ ವಿಕಲಚೇತನ ಯುವಕ ಹಾಗೂ ಸಾಹಿತಿ ಹನುಮಂತ ಕುರುಬರ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ರಾಜ್ಯಮಟ್ಟದ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಡಿಸೆಂಬರ್ 3ರಂದು ಬೆಂಗಳೂರಿನ ಕಂಠೀರವ ಒಳ ಕ್ರೀಡಾಂಗಣದಲ್ಲಿ ಜರುಗಿದ ಜರುಗಿದ ವಿಶ್ವ ವಿಕಲಚೇತನ ದಿನಾಚರಣೆ ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿ ಮಾತನಾಡಿದರು. ನಂತರ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ವಿಕಲಚೇತನ ಸಾಧಕರಿಗೆ ರಾಜ್ಯಮಟ್ಟದ ಪ್ರಶಸ್ತಿ ನೀಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಬಿ ಸಿ ಪ್ರಕಾಶ ಮತ್ತು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕ ಎನ್ ಸಿದ್ದೇಶ್ವರ ಸೇರಿದಂತೆ ಇನ್ನಿತರರು ಉಪಸ್ಥಿತಿಯಲ್ಲಿ ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದ ಯುವಕ ಬೆನ್ನುಹುರಿ ಅಪಘಾತದಲ್ಲಿ ದಿವ್ಯಂಗನಾದ ಹನುಮಂತ ಕುರುಬರ ಪದವೀಧರ ವಿದ್ಯಾರ್ಥಿಯಾಗಿ ಸಾಹಿತ್ಯ ಮತ್ತು ಬರವಣಿಗೆಯಲ್ಲಿ ಮಾಡುತ್ತಿರುವ ಸಾಧನೆ ಮತ್ತು ಸಾಮಾಜಿಕ ಸೇವೆಯನ್ನು ಪರಿಗಣಿಸಿ ವಿಕಲಚೇತನರ ಸಬಲೀಕರಣ ಇಲಾಖೆಯಿಂದ ರಾಜ್ಯಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಯಿತು. ರಾಜ್ಯಮಟ್ಟದ ಪ್ರಶಸ್ತಿ ಪಡೆದುಕೊಂಡಿರುವ ಹನುಮಂತ ಕುರುಬರ ಇವರಿಗೆ ಮಾಜಿ ಡಿಸಿಎಂ ಹಾಗೂ ಶಾಸಕ ಲಕ್ಷ್ಮಣ ಸವದಿ ಹಾಗೂ ತಾಲೂಕ ಆಡಳಿತ, ಕನ್ನಡ ಪರ ಸಂಘಟನೆಗಳು ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.