ಅದ್ದೂರಿಯಾಗಿ ಜರುಗಿದ ಅಯ್ಯಪ್ಪ ಸ್ವಾಮಿ ಮಹಾಪೂಜೆ

(ಸಂಜೆವಾಣಿ ವಾರ್ತೆ)
ಬಾದಾಮಿ,ಡಿ23: ತಾಲೂಕಿನ ಜಾಲಿಹಾಳ ಗ್ರಾಮದ ರಂಗಮಂಟಪದ ಆವರಣದಲ್ಲಿ ಅಯ್ಯಪ್ಪಸ್ವಾಮಿ ಮಹಾಪೂಜೆ ಮತ್ತು ಅಗ್ನಿ ಪ್ರವೇಶ ಕಾರ್ಯಕ್ರಮ ಜರುಗಿತು.
ವಿವಿಧ ಬಗೆಯ ಹೂವುಗಳಿಂದ ಅಯ್ಯಪ್ಪಸ್ವಾಮಿಯ ಭಾವಚಿತ್ರವನ್ನು ಶೃಂಗರಿಸಿ, ಬಾಳೆ ದಿಂಡಿನಿಂದ 18 ಮೆಟ್ಟಿಲುಗಳನ್ನು ನಿರ್ಮಿಸಲಾಗಿತ್ತು. ಆ 18 ಮೆಟ್ಟಿಲುಗಳಿಗೆ ಹೂವಿನಿಂದ ವಿಶೇಷ ಅಲಂಕಾರ ಹಾಗೂ ಮೆಟ್ಟಿಲುಗಳ ಮೇಲೆ ದೀಪಗಳನ್ನು ಪ್ರಜ್ವಲಿಸುವಂತೆ ಮಾಡಲಾಗಿತ್ತು. ಅಯ್ಯಪ್ಪ ಸ್ವಾಮಿ ಮೂರ್ತಿಗೆ ಸೇವಂತಿಗೆ, ತಾವರೆ, ತುಳಸಿ, ಮಲ್ಲಿಗೆ, ಬಿಲ್ವಪತ್ರೆಗಳಿಂದ ಪುμÁ್ಪಭಿμÉೀಕ ಮಾಡಿದರು.
ಈ ಮಹಾಪೂಜೆ ಕಾರ್ಯಕ್ರಮದಲ್ಲಿ ಅಯ್ಯಪ್ಪನ ಗೀತ-ಗಾಯನಗಳು ಭಕ್ತರಲ್ಲಿ ಸಂಗೀತ ಸುಧೆಯಲ್ಲಿ ಮಿಂದೆಳುವಂತೆ ಮಾಡಿತು. ಅಯ್ಯಪ್ಪ ಮಾಲಾಧಾರಿಗಳು ಮತ್ತು ಭಕ್ತರು ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.