ಅದ್ದೂರಿ ಕನಕದಾಸರ ಜಯಂತಿ ಆಚರಣೆಗೆ ನಿರ್ಧಾರ

ಚಾಮರಾಜನಗರ, ನ.06:- ದಾಸಶ್ರೇಷ್ಠ ಕನಕದಾಸರ ಜಯಂತಿ ಆಚರಣೆ ಕಾರ್ಯಕ್ರಮವನ್ನು ನವೆಂಬರ್ 11ರಂದು ಜಿಲ್ಲಾಡಳಿತ ವತಿಯಿಂದ ಎಲ್ಲರ ಸಹಕಾರದೊಂದಿಗೆ ನಗರದಲ್ಲಿ ಅದ್ದೂರಿಯಾಗಿ ಆಚರಿಸಲು ನಿರ್ಧಾರ ತೆಗೆದುಕೊಳ್ಳಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿ ದೇವಿ ಅವರ ಅÀಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಕನಕದಾಸರ ಜಯಂತಿಯನ್ನು ಅದ್ದೂರಿ ಹಾಗೂ ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲು ತೀರ್ಮಾನಿಸಲಾಯಿತು.
ನಗರದ ಪ್ರವಾಸಿ ಮಂದಿರದಲ್ಲಿ ಕನಕದಾಸರ ಭಾವಚಿತ್ರದ ಮೆರವಣಿಗೆಗೆ ಚಾಲನೆ ನೀಡಲು, ರಥದಲ್ಲಿ ಕನಕದಾಸರ ಭಾವಚಿತ್ರ ಪ್ರತಿಷ್ಠಾಪಿಸಿ ವಿವಿಧ ಜಾನಪದ ಕಲಾ ತಂಡಗಳೊಡನೆ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಲು À ನಿರ್ಧಾರ ಕೈಗೊಳ್ಳಲಾಯಿತು.
ತದನಂತರ ನಗರದ ಜಿಲ್ಲಾಡಳಿತ ಭವನದಲ್ಲಿರುವ ವರನಟ ಡಾ.ರಾಜ್ ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಏರ್ಪಾಡು ಮಾಡಲು ಸಭೆ ತೀರ್ಮಾನಿಸಿತು.
ಇದೇ ಸಂದರ್ಭದಲ್ಲಿ ಹಾಜರಿದ್ದ ವಿವಿಧ ಸಂಘಟನೆಗಳ, ಸಮುದಾಯದ ಮುಖಂಡರು ಮಾತನಾಡಿ ಹೆಚ್ಚಿನ ಜನರು ಕನಕದಾಸರ ಜಯಂತಿ ಕಾರ್ಯಕ್ರಮದಂದು ಆಗಮಿಸುವ ಹಿನ್ನೆಲೆಯಲ್ಲಿ ಅಚ್ಚುಕಟ್ಟಾಗಿ ಎಲ್ಲಾ ಸಿದ್ದತೆಗಳನ್ನು ಕೈಗೊಳ್ಳಬೇಕು. ಕಲಾತಂಡಗಳು ಹೆಚ್ಚು ಸಂಖ್ಯೆಯಲ್ಲಿ ನಿಯೋಜನೆ, ನಿಗದಿತ ಸಮಯದೊಳಗೆ ಆಹ್ವಾನ ಪತ್ರಿಕೆ ಮುದ್ರಣ ಮತ್ತು ವಿತರಣೆಯಾಗಬೇಕು. ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಿಬ್ಬಂದಿ ಕಡ್ಡಾಯವಾಗಿ ಕಾರ್ಯಕ್ರಮಕ್ಕೆ ಹಾಜರಾಗಬೇಕು. ಕನಕದಾಸರ ವಿಚಾರಧಾರೆಗಳು ಎಲ್ಲರಿಗೂ ಮನಮುಟ್ಟುವಂತಾದರೆ ಜಯಂತಿ ಆಚರಣೆಗೂ ಅರ್ಥ ಬರುತ್ತದೆ ಎಂದರು.
ದಾರ್ಶನಿಕರ, ಮಹಾಪುರುಷರ ಜಯಂತಿ, ರಾಷ್ಟ್ರೀಯ ಕಾರ್ಯಕ್ರಮಗಳು ಯಾವುದೇ ಇರಲಿ ಪೂರ್ವಭಾವಿ ಸಭೆ ನಡೆಸುವಾಗ ಎಲ್ಲಾ ಸಮುದಾಯಗಳ ಮುಖಂಡರು ಪ್ರತಿನಿಧಿಗಳಿಗೆ ಆಹ್ವಾನಿಸುವ ಪತ್ರವನ್ನು ಖುದ್ದಾಗಿ ತಲುಪಿಸಬೇಕು. ಎಲ್ಲಾ ಇಲಾಖೆಯ ಅಧಿಕಾರಿಗಳು ಪೂರ್ವಭಾವಿ ಸಭೆಯಲ್ಲಿ ಹಾಜರಿರಬೇಕು ಎಂಬುದು ಸೇರಿದಂತೆ ಇತರೆ ಸಲಹೆಗಳನ್ನು ಮುಖಂಡರು ನೀಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿ ದೇವಿ ಅವರು ಮಾತನಾಡಿ ಕನಕದಾಸರ ಜಯಂತಿ ಆಚರಣೆ ಕಾರ್ಯಕ್ರಮ ಸುವ್ಯವಸ್ಥಿತವಾಗಿ ನಡೆಯಲು ಅಗತ್ಯವಿರುವ ಎಲ್ಲಾ ಏರ್ಪಾಡುಗಳನ್ನು ಮಾಡಲಾಗುತ್ತದೆ. ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಜವಾಬ್ದಾರಿ ನೀಡಿ ಕಾರ್ಯಕ್ರಮ ಆಯೋಜನೆಗೆ ಸೂಚನೆ ನೀಡಲಾಗುವುದು ಎಂದರು.
ಕನಕದಾಸರ ವಿಚಾರ ಮೌಲ್ಯಗಳ ಬಗ್ಗೆ ಉಪನ್ಯಾಸ ನೀಡುವ ಮುಖ್ಯ ಭಾಷಣಕಾರರನ್ನು ಆಹ್ವಾನಿಸುವ ಸಂಬಂಧ ಮುಖಂಡರು ನೀಡುವ ಸಲಹೆಯನ್ನು ಪರಿಗಣಿಸಲಾಗುವುದು. ಜಿಲ್ಲಾಡಳಿತದ ಜೊತೆ ಸರ್ವರು ಸಹಕರಿಸುವ ಮೂಲಕ ಕನಕದಾಸರ ಜಯಂತಿ ಆಚರಣೆ ಯಶಸ್ವಿಗೊಳಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿ ದೇವಿ ಅವರು ಮನವಿ ಮಾಡಿದರು.
ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಗುಡೂರು ಭೀಮಸೇನ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಗುರುಲಿಂಗಯ್ಯ, ಮುಖಂಡರಾದ ಸಿ.ಎನ್. ಬಾಲರಾಜು, ಶಾ. ಮುರಳಿ, ಕುಮಾರಸ್ವಾಮಿ, ಎಂ. ಸ್ವಾಮಿ, ಬಿ. ಶಿವಲಿಂಗೇಗೌಡ, ರವಿಕುಮಾರ್ ಮಾದಾಪುರ, ಕೆ.ಪಿ. ನಾಗರಾಜು, ಜಿ. ಬಂಗಾರು, ಪಿ. ಮಾದಮ್ಮ, ಎಸ್. ಮಲ್ಲೇಶ, ಎಂ. ರಾಜು, ಕುಮಾರ್, ಬಿ. ಸ್ವಾಮಿ, ಎಂ. ಶಿವಣ್ಣ, ಎಸ್.ಪಿ. ಚಂದ್ರಶೇಖರ್, ನಂಜುಂಡಸ್ವಾಮಿ, ನಾಗೇಶ್, ಹೊಂಗನೂರು ನಟರಾಜು, ಎಸ್. ಮಹದೇವ, ಇತರೆ ಮುಖಂಡರು, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಎಸ್.ಎನ್. ಮಂಜುನಾಥ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕೆ. ಮಂಜುಳಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಗೀತಾಲಕ್ಷ್ಮಿ, ಆಹಾರ ಇಲಾಖೆಯ ಉಪನಿರ್ದೇಶಕರಾದ ಯೋಗಾನಂದ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.