ಅದ್ದೂರಿ ಕನ್ನಡ ಹಬ್ಬ: ಪುನೀತ್‌ಗೆ ನಮನ

ಬೆಂಗಳೂರು, ನ. ೨- ಜಯಕರ್ನಾಟಕ ಜನಪರ ವೇದಿಕೆ, ಐಕೇರ್ ಬ್ರಿಗೇಡ್ ಯುವ ಸಂಸ್ಥಾಪಕ ಅಧ್ಯಕ್ಷ ಬಿ.ಗುಣರಂಜನ್ ಶೆಟ್ಟಿ ನೇತೃತ್ವದಲ್ಲಿ ಜಯಕರ್ನಾಟಕ ಜನಪರ ವೇದಿಕೆಯಿಂದ ಬಾರ್ಟನ್ ಸೆಂಟರ್‌ನ ಅಂಗಳದಲ್ಲಿ ೬೭ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ರಾಜ್ಯಾಧ್ಯಕ್ಷ ಆರ್.ಚಂದ್ರಪ್ಪ ಉಪಸ್ಥಿತಿ, ಬೆಂಗಳೂರು ಜಿಲ್ಲೆ ಅಧ್ಯಕ್ಷ ಜೆ.ಶ್ರೀನಿವಾಸ್ ಅಧ್ಯಕ್ಷತೆಯಲ್ಲಿ ಭುವನೇಶ್ವರಿ ದೇವಿಗೆ ಪೂಜೆಯನ್ನು ಸಲ್ಲಿಸಿ ಧ್ವಜಾರೋಹಣ ನೆರವೇರಿಸಲಾಯಿತು. ಬಳಿಕಕರ್ನಾಟಕ ರತ್ನ ಪುನೀತ್ ರಾಜ್‌ಕುಮಾರ್ ಅವರ ಭಾವಚಿತ್ರಕ್ಕೆ ಗೌರವಪೂರ್ವಕವಾಗಿ ನಮನ ಅರ್ಪಿಸಿ, ಚರ್ಚ್ ಸ್ಟ್ರೀಟ್, ಬ್ರಿಗೇಡ್ ರಸ್ತೆಯ ಮೂಲಕ ಎಂ.ಜಿ.ರಸ್ತೆಯ ಸಿಗ್ನಲ್ ವರೆಗೆ ಕಾಲ್ನಡಿಗೆಯಲ್ಲಿ ಜಾಥವನ್ನು ಮಾಡುವ ಮೂಲಕ ಅದ್ದೂರಿಯಾಗಿ ಆಚರಿಸಲಾಯಿತು.
ಮುಖ್ಯ ಅಥಿತಿಗಳಾಗಿ ರೈಲ್ವೆ ಪೊಲೀಸ್ ಮಾಜಿ ಮಹಾ ನಿರ್ದೇಶಕ ಭಾಸ್ಕರ್ ರಾವ್, ಶಾಸಕ ಹಾರಿಸ್, ಬೇಲೂರು ರಾಘವೇಂದ್ರ ಶೆಟ್ಟಿ, ಮಾಜಿ ಅಧ್ಯಕ್ಷರು, ಕರಕುಶಲ ನಿಗಮ ಮಂಡಳಿ, ಗೌತಮ್ ಕುಮಾರ್ ರವರು, ಮಾಜಿ ಮಹಾಪೌರ, ಪ್ರಫುಲ ವಿ. ಶೆಟ್ಟಿ, ಬಾರ್ಟನ್ ಸೆಂಟರ್ ಅಸೋಸಿಯೇಷನ್ ಕಾರ್ಯದರ್ಶಿ ರಾಜೇಶ್ ಆಗಮಿಸಿದ್ದರು.
ಜಯಕರ್ನಾಟಕ ಜನಪರ ವೇದಿಕೆಯ ರಾಜ್ಯ ಮತ್ತು ಬೆಂಗಳೂರು ಜಿಲ್ಲಾ ಪದಾಧಿಕಾರಿಗಳು, ಮಹಿಳಾ ಪದಾಧಿಕಾರಿಗಳು, ವಿಧಾನಸಭಾ ಕ್ಷೇತ್ರದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಹೋಟೆಲ್ ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಐಕೇರ್ ಬ್ರಿಗೇಡ್ ಸಂಸ್ಥೆಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಸೇರಿದಂತೆ ಕನ್ನಡಪರ ಸಂಘಟನೆಯ ಮುಖಂಡರು ಹಾಗೂ ಹಲವಾರು ಗಣ್ಯರು ಉಪಸ್ಥಿತರಿದ್ದರು.