ಧಾರವಾಡ,ಜು.26: ಬರುವ ಆಗಸ್ಟ್ 15 ರಂದು ಧಾರವಾಡ ಜಿಲ್ಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲು, ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಹೇಳಿದರು.
ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಿದ್ಧತೆ ಸಭೆ ಜರುಗಿಸಿ, ಮಾತನಾಡಿದರು.
ಜಿಲ್ಲಾಮಟ್ಟದ ಕಾರ್ಯಕ್ರಮವನ್ನು ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗುತ್ತದೆ. ಮಳೆಗಾಲವಿರುವುದರಿಂದ ಶಾಲಾ ಮಕ್ಕಳು, ಸಾರ್ವಜನಿಕರಿಗೆ, ಅತಿಥಿಗಳಿಗೆ ಕಾರ್ಯಕ್ರಮ ವೀಕ್ಷಣೆಗೆ ತೊಂದರೆ ಆಗದಂತೆ ಸಿದ್ಧತೆ ಮಾಡಿಕೊಳ್ಳಬೇಕು. ವೇದಿಕೆ ಸಿದ್ಧತೆ, ದೀಪಾಲಂಕಾರ, ಸಾಂಸ್ಕøತಿಕ ಕಾರ್ಯಕ್ರಮ, ಕವಾಯತು ಸೇರಿದಂತೆ ಪ್ರತಿ ಕಾರ್ಯಗಳು ಅಚ್ಚುಕಟ್ಟಾಗಿ ನಡೆಯುವಂತೆ ನೋಡಿಕೊಳ್ಳಬೇಕು. ಅಧಿಕಾರಿಗಳು ತಮಗೆ ನೀಡಿರುವ ಕಾರ್ಯಗಳನ್ನು ಪೂರೈಸಿ, ವರದಿ ನೀಡಬೇಕು ಎಂದು ಹೇಳಿದರು.
ಸಚಿವರ ಸ್ವಾತಂತ್ರ್ಯೋತ್ಸವ ಸಂದೇಶಕ್ಕೆ ಎಲ್ಲ ಇಲಾಖೆಗಳು ಪ್ರಸ್ತುತ ಸರಕಾರದ ಕಾರ್ಯಕ್ರಮಗಳ ಅನು?Á್ಠನ, ಪ್ರಗತಿ ಕುರಿತ ಒಂದು ಪುಟದ ವರದಿಯನ್ನು ಜುಲೈ 31, 2023 ರೊಳಗೆ ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಸಲ್ಲಿಸಬೇಕು ಮತ್ತು ಅದರ ಸಾಫ್ಟ್ ಕಾಪಿಯನ್ನು vಚಿಡಿಣhಚಿbhಚಿvಚಿಟಿಜತಿಜ74@gmಚಿiಟ.ಛಿom ಗೆ ಮೇಲ್ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಬಿ.ಎಸ್.ಮೂಗನೂರಮಠ, ಅಬಕಾರಿ ಇಲಾಖೆ ಉಪಆಯುಕ್ತ ಕೆ.ಪ್ರಶಾಂತಕುಮಾರ, ಹೆಸ್ಕಾಂ ಕಾರ್ಯಪಾಲಕ ಅಭಿಯಂತರ ಎಂ.ಎಂ.ನದಾಫ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಕೆ.ಸಿ.ಭದ್ರನ್ನವರ, ಕೈಗಾರಿಕೆ ಇಲಾಖೆಯ ಉಪನಿರ್ದೇಶಕ ಡಾ. ಭೀಮಪ್ಪ, ಧಾರವಾಡ ತಹಸಿಲ್ದಾರ ಡಾ.ಮೋಹನ ಭಸ್ಮೆ, ಅಗ್ನಿಶಾಮಕ ಠಾಣಾಧಿಕಾರಿ ಅಮೃತ ಟಿ., ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆ ಸಹಾಯಕ ನಿರ್ದೇಶಕ ಪ್ರಕಾಶ ಸರಶಟ್ಟಿ, ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಕ್ ಸಾರ್ವಜನಿಕ ಸಂಪರ್ಕ ಅಧಿಕಾರಿ ಉಲ್ಲಾಸ ಗುಣಗಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೆರಿ ಅವರು ಸ್ವಾಗತಿಸಿ, ಸಭೆ ನಿರ್ವಹಿಸಿದರು.